ಚಿತ್ರದುರ್ಗ: ಪೋಷಕರಿಗೆ ಕರೆ ಮಾಡಿದ ವಿದ್ಯಾರ್ಥಿಯ ಮೇಲೆ ಮುಖ್ಯ ಶಿಕ್ಷಕನಿಂದ ಹಲ್ಲೆ ನಡೆದಿರುವ ಅಮಾನುಷ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಗ್ರಾಮದಲ್ಲಿ ನಡೆದಿದೆ. ಈ ಕ್ರೌರ್ಯದ ವೀಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಗ್ರಾಮದಲ್ಲಿರುವ ಗುರು ತಿಪ್ಪೇರುದ್ರಸ್ವಾಮಿ ದೇಗುಲದ ವೇದಾಧ್ಯಯನ ಶಾಲೆಯಲ್ಲಿ ಉತ್ತರ ಕರ್ನಾಟಕ ಮೂಲದ ವಿದ್ಯಾರ್ಥಿಯೊಬ್ಬ ಓದುತ್ತಿದ್ದಾನೆ. ಆತನು ದೂರದ ಊರಿನಲ್ಲಿರುವ ತನ್ನ ಪೋಷಕರಿಗೆ ಬೇರೊಬ್ಬರ ಮೊಬೈಲ್‌ನಿಂದ ಕರೆ ಮಾಡಿದ ಕಾರಣಕ್ಕೆ ಮುಖ್ಯ ಶಿಕ್ಷಕ ವೀರೇಶ್ ಹಿರೇಮಠ್ ಆಕ್ರೋಶಗೊಂಡು ವಿದ್ಯಾರ್ಥಿಗೆ ಹಲ್ಲೆ ನಡೆಸಿದ್ದಾನೆ.
ಶಿಕ್ಷಕ ವಿದ್ಯಾರ್ಥಿಯ ಕಾಲಿಗೆ ಒದ್ದಾಡಿ ಕ್ರೌರ್ಯ ಮೆರೆದಿದ್ದು, ಈ ದೃಶ್ಯ ಮೊಬೈಲ್‌ನಲ್ಲಿ ಸೆರೆಯಾಗಿದೆ. ಇದೀಗ ವೀಡಿಯೋ ವೈರಲ್ ಆಗಿ ಸಾರ್ವಜನಿಕರಲ್ಲಿ ಆಕ್ರೋಶ ವ್ಯಕ್ತವಾಗಿದೆ. ಘಟನೆ ಬಳಿಕ ಆರೋಪಿಯು ನಾಪತ್ತೆಯಾಗಿದ್ದಾನೆ. ಈ ಕುರಿತು ನಾಯಕನಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.