HomeGadag Newsಆರೋಗ್ಯವಂತ ಮಗು ದೇಶದ ಸಂಪತ್ತು : ಡಾ. ಪ್ರಿಯಾಂಕಾ

ಆರೋಗ್ಯವಂತ ಮಗು ದೇಶದ ಸಂಪತ್ತು : ಡಾ. ಪ್ರಿಯಾಂಕಾ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಮುಳಗುಂದ : ಆರೋಗ್ಯವಂತ ಮಗು ದೇಶದ ಸಂಪತ್ತು ಎಂದು ರಾಷ್ಟ್ರೀಯ ಬಾಲ ಸ್ವಾಸ್ಥ್ಯದ ವೈದ್ಯಾಧಿಕಾರಿ ಡಾ. ಪ್ರಿಯಾಂಕಾ ಹೇಳಿದರು.

ಅವರು ಪಟ್ಟಣದ ಸರಕಾರಿ ಮಾದರಿ ಕನ್ನಡ ಗಂಡು ಮಕ್ಕಳ ಶಾಲೆ ನಂ 1ರಲ್ಲಿ ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮದಡಿ ಶಾಲಾ ಮಕ್ಕಳ ಆರೋಗ್ಯ ತಪಾಸಣೆ ಮಾಡಿ ಮಾತನಾಡಿ, ಸರಕಾರಿ ಮತ್ತು ಅನುದಾನಿತ ಶಾಲೆಗಳ 0-18ವರ್ಷದ ಮಕ್ಕಳಿಗಾಗಿ ಪ್ರತಿ ವರ್ಷ ಕೇಂದ್ರ ಹಾಗೂ ರಾಜ್ಯ ಸರಕಾರದಿಂದ ಮಕ್ಕಳ ಆರೋಗ್ಯದ ಹಿತ ದೃಷ್ಟಿಯಿಂದ ಆರೋಗ್ಯ ತಪಾಸಣೆ ಮಾಡಲಾಗುತ್ತಿದೆ. ಮಕ್ಕಳು ಉತ್ತಮ ಆರೋಗ್ಯ ಹೊಂದಿದಲ್ಲಿ ದೇಶ ಆರೋಗ್ಯ ಹೊಂದಿದಂತೆ ಎಂದರು.

ಡಾ. ಆಸ್ಮಾ, ರಾಮಕೃಷ್ಣ, ಶಾಲಾ ಪ್ರಧಾನಗುರು ಪಿ.ಬಿ. ಕೆಂಚನಗೌಡರ, ಎಂ.ಎಂ. ಮೆಗಲಮನಿ, ಎಂ.ಎಂ. ಕೊಪ್ಪಳ, ಕೆ.ಎಂ. ಹೆರಕಲ್ಲ, ಮಂಜುನಾಥ ಕಲ್ಯಾಣಮಠ, ಎಚ್.ಆರ್. ಭಜೆಂತ್ರಿ, ಎಸ್.ಎಚ್. ಉಪ್ಪಾರ, ಟಿ. ವೀಣಾ, ವಿ.ಎಂ. ಕಂಠಿ, ನಂದಾ ಮಟ್ಟಿ, ಶಭಾನಾ ಡಾಲಾಯತ, ಪವಿತ್ರಾ ಮಟ್ಟಿ, ಜ್ಯೋತಿ ಜಾಧಾವ ಇದ್ದರು.

LEAVE A REPLY

Please enter your comment!
Please enter your name here

E-Paper

E-paper

Must Read

spot_img