ಭುವನೇಶ್ವರ:- ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ಒಡಿಶಾ ಮಾಜಿ ಸಿಎಂ ನವೀನ್ ಪಟ್ನಾಯಕ್ ಅವರು ದಿಢೀರ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಪಟ್ನಾಯಕ್ ಶನಿವಾರ ರಾತ್ರಿ ಅಸ್ವಸ್ಥಗೊಂಡಿದ್ದರು. ಕೂಡಲೇ ವೈದ್ಯರು ಆರೋಗ್ಯ ತಪಾಸಣೆ ನಡೆಸಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯದ ಕುರಿತು ಆಸ್ಪತ್ರೆ ಶೀಘ್ರದಲ್ಲೇ ಬುಲೆಟಿನ್ ಬಿಡುಗಡೆ ಮಾಡಲಿದೆ ಎಂದು ಬಿಜೆಡಿ ಹಿರಿಯ ನಾಯಕ ನವೀನ್ ನಿವಾಸ್ ತಿಳಿಸಿದ್ದಾರೆ.
ನವೀನ್ ಪಟ್ನಾಯಕ್ ಜೂನ್ 22ರಂದು ಮುಂಬೈನ ಆಸ್ಪತ್ರೆಯೊಂದರಲ್ಲಿ ಬೆನ್ನುಮೂಳೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಜುಲೈ 7ರಂದು ಅವರನ್ನು ಮುಂಬೈ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು. ಬಳಿಕ ಜುಲೈ 12ರಂದು ಒಡಿಶಾಗೆ ಮರಳಿದ್ದರು. ಇದೀಗ ಆರೋಗ್ಯದಲ್ಲಿ ಏರುಪೇರಾಗಿರುವ ಹಿನ್ನೆಲೆ ದಿಢೀರ್ ಆಸ್ಪತ್ರೆಗೆ ದಾಖಲಾಗಿದ್ದಾರೆ.



