Home Uncategorized ಆರೋಗ್ಯದಲ್ಲಿ ಚೇತರಿಕೆ: ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ವಿಜಯ್ ದೇವರಕೊಂಡ!

ಆರೋಗ್ಯದಲ್ಲಿ ಚೇತರಿಕೆ: ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ವಿಜಯ್ ದೇವರಕೊಂಡ!

0
ಆರೋಗ್ಯದಲ್ಲಿ ಚೇತರಿಕೆ: ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ವಿಜಯ್ ದೇವರಕೊಂಡ!
Spread the love

ಇತ್ತೀಚೆಗೆ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಟಾಲಿವುಡ್ ಸ್ಟಾರ್ ವಿಜಯ್ ದೇವರಕೊಂಡ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ನಟ ವಿಜಯ್ ದೇವರಕೊಂಡ ಇತ್ತೀಚೆಗೆ ದಿಢೀರ್ ಅಂತಾ ಆಸ್ಪತ್ರೆಗೆ ದಾಖಲಾಗಿದ್ದರು. ಅವರ ಅಭಿಮಾನಿಗಳು ಕೊಂಚ ಗಾಬರಿಯಾಗಿದ್ದರು. ಆರೆ ಗಾಬರಿಪಡುವಂತದ್ದು ಏನು ಆಗಿಲ್ಲ, ಡೆಂಗ್ಯೂ ಫೀವರ್‌ನಿಂದ ಬಳಲುತ್ತಿದ್ದಾರೆ ಚಿಕಿತ್ಸೆಗಾಗಿ, ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗಿತ್ತು. ಇದೀಗ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಬಂದಿದ್ದಾರೆ.

ಅಂದಹಾಗೆ ವಿಜಯ್ ದೇವರಕೊಂಡ ಅಭಿನಯದ ಮೋಸ್ಟ್ ಅವೈಟೆಡ್ ಸಿನಿಮಾ ಕಿಂಗ್‌ಡಮ್ ಇದೇ ಜುಲೈ 31ಕ್ಕೆ ತೆರೆಗೆ ಬರಲಿದೆ. ಈ ಸಿನಿಮಾದ ಪ್ರಮೋಷನ್ ಕೆಲಸಗಳು ಬಾಕಿ ಇವೆ ಹೀಗಾಗಿ ನಟ ವಿಜಯ್ ದೇವರಕೊಂಡ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸಿನಿಮಾ ತೆರೆಗೆ ಬರೋಕೆ ಇನ್ನೊಂದು ವಾರ ಬಾಕಿ ಇದೆ. ಈ ನಿಟ್ಟಿನಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಳ್ಳುವುದು ಅನಿವಾರ್ಯವಾಗಿದೆ.


Spread the love

LEAVE A REPLY

Please enter your comment!
Please enter your name here