HomeGadag Newsಆರೋಗ್ಯವೇ ನಿಜವಾದ ಸಂಪತ್ತು: ಶಾಸಕ ಡಾ. ಚಂದ್ರು ಲಮಾಣಿ

ಆರೋಗ್ಯವೇ ನಿಜವಾದ ಸಂಪತ್ತು: ಶಾಸಕ ಡಾ. ಚಂದ್ರು ಲಮಾಣಿ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಮನುಷ್ಯನಿಗೆ ಎಲ್ಲ ಸಂಪತ್ತುಗಳಿಗಿಂತ ಆರೋಗ್ಯ ಸಂಪತ್ತು ಅತ್ಯಂತ ಮುಖ್ಯವಾಗಿದ್ದು, ಉತ್ತಮ ಆರೋಗ್ಯವೇ ಅಭಿವೃದ್ಧಿಯ ರಹದಾರಿಯಾಗಿದೆ ಎಂದು ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು.

ಪಟ್ಟಣದ ಬಾಲಾಜಿ ಆಸ್ಪತ್ರೆಯಲ್ಲಿ ಭಾರತೀಯ ಜನತಾ ಪಾರ್ಟಿ ಶಿರಹಟ್ಟಿ ಮಂಡಲ, ಬಾಲಾಜಿ ಆಸ್ಪತ್ರೆ, ಬೆಂಗಳೂರಿನ ಸಪ್ತಗಿರಿ ಆಸ್ಪತ್ರೆ ಹಾಗೂ ಜಯಪ್ರಿಯಾ ಕಣ್ಣಿನ ಆಸ್ಪತ್ರೆ, ಹುಬ್ಬಳ್ಳಿ ಸಹಯೋಗದಲ್ಲಿ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪ್ರಧಾನಿ ನರೇಂದ್ರ ಮೋದಿ ಅವರ 12 ವರ್ಷಗಳ ಜನಪರ ಆಡಳಿತದ ಅಂಗವಾಗಿ ಹಮ್ಮಿಕೊಂಡಿದ್ದ ಈ ಶಿಬಿರದಲ್ಲಿ ಸಾರ್ವಜನಿಕರಿಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವ ಉದ್ದೇಶ ಹೊಂದಲಾಗಿದೆ. ಕಲುಷಿತ ವಾತಾವರಣ, ಕಲಬೆರಕೆ ಆಹಾರ ಹಾಗೂ ಒತ್ತಡದ ಜೀವನಶೈಲಿಯಿಂದ ಅನೇಕ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿದ್ದು, ಗ್ರಾಮೀಣ ಭಾಗದ ಜನರಿಗೆ ತಜ್ಞ ವೈದ್ಯರ ಸೇವೆ ತಲುಪಿಸಲು ಇಂತಹ ಶಿಬಿರಗಳು ಸಹಕಾರಿಯಾಗುತ್ತವೆ ಎಂದು ಹೇಳಿದರು.

ಸಪ್ತಗಿರಿ ಆಸ್ಪತ್ರೆಯ ಡಾ. ನಂದಕುಮಾರ ಮಾತನಾಡಿ, ಬಡತನದ ಕಾರಣದಿಂದ ತಜ್ಞ ವೈದ್ಯರ ಚಿಕಿತ್ಸೆ ಪಡೆಯಲು ಸಾಧ್ಯವಾಗದವರಿಗೆ ಉಚಿತ ಆರೋಗ್ಯ ಶಿಬಿರಗಳು ವರದಾನವಾಗಿವೆ. ಜನಸೇವೆಯ ಕಾಳಜಿಯಿಂದ ಶಾಸಕ ಡಾ. ಚಂದ್ರು ಲಮಾಣಿ ಇಂತಹ ಜನಪರ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದ್ದಾರೆ ಎಂದು ಶ್ಲಾಘಿಸಿದರು.

ಶಿಬಿರದಲ್ಲಿ ಹೃದಯ, ಮೂಳೆ, ಕಿಡ್ನಿ ಹಾಗೂ ನರರೋಗ ತಜ್ಞರು ಭಾಗವಹಿಸಿ ಆರೋಗ್ಯ ತಪಾಸಣೆ ನಡೆಸಿದರು. ಇಸಿಜಿ, 2-ಡಿ ಇಕೋ ಪರೀಕ್ಷೆಗಳು ಹಾಗೂ ಔಷಧಿಗಳನ್ನು ಉಚಿತವಾಗಿ ವಿತರಿಸಲಾಯಿತು. ಸುಮಾರು 300ರಿಂದ 400ಕ್ಕೂ ಹೆಚ್ಚು ಜನರು ಶಿಬಿರದ ಪ್ರಯೋಜನ ಪಡೆದುಕೊಂಡರು.

ಈ ಸಂದರ್ಭದಲ್ಲಿ ತಾಪಂ ಮಾಜಿ ಅಧ್ಯಕ್ಷ ಅಶೋಕ ಪಲ್ಲೆದ, ಗಿರೀಶ ಚೌರಡ್ಡಿ, ಗಂಗಾಧರ ಮೆಣಸಿನಕಾಯಿ, ನಿಂಗಪ್ಪ ಬನ್ನಿ, ಜಾನು ಲಮಾಣಿ, ಬಸವರಾಜ ಚಕ್ರಸಾಲಿ, ರಮೇಶ ಲಮಾಣಿ, ಹನುಮಂತ ಲಮಾಣಿ, ಈರಣ್ಣ ಅಕ್ಕೂರ, ಡಾ. ವೆಂಕಟೇಶ ಮಾಡೊಳ್ಳಿ, ಡಾ. ಪ್ರಭು, ಡಾ. ಗೋಪಾಲಕೃಷ್ಣ, ಡಾ. ನವೀನ್, ಡಾ. ಭರತ ಹಾಗೂ ಆಸ್ಪತ್ರೆಯ ಸಿಬ್ಬಂದಿ ಉಪಸ್ಥಿತರಿದ್ದರು.

“ಧನ-ಸಂಪತ್ತಿಗಿಂತ ಆರೋಗ್ಯ ಸಂಪತ್ತು ದೊಡ್ಡದು. ಆರೋಗ್ಯವಂತ ಸಮಾಜ ನಿರ್ಮಾಣವೇ ನಮ್ಮ ಗುರಿಯಾಗಿದ್ದು, ಜನರಿಗೆ ಗುಣಮಟ್ಟದ ವೈದ್ಯಕೀಯ ಸೇವೆ ತಲುಪಿಸುವುದು ನಮ್ಮ ಆದ್ಯತೆ.”

– ಡಾ. ಚಂದ್ರು ಲಮಾಣಿ, ಶಾಸಕ


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!