ಆರೋಗ್ಯ ಸಂಪತ್ತು ಅಮೂಲ್ಯವಾಗಿದೆ

0
kridakoota
Spread the love

ವಿಜಯಸಾಕ್ಷಿ ಸುದ್ದಿ, ಗದಗ : ಪ್ರತಿಯೊಬ್ಬರಿಗೂ ಆರೋಗ್ಯ ಸಂಪತ್ತು ಮುಖ್ಯವಾಗಿದೆ. ನೌಕರರು ತಮ್ಮ ಆರೋಗ್ಯ ಸಂರಕ್ಷಣೆಗೆ ಹೆಚ್ಚಿನ ಪ್ರಾಶಸ್ತ್ಯ ಕೊಟ್ಟು ಕ್ರೀಡೆಗಳಲ್ಲಿ ಪಾಲ್ಗೊಳ್ಳಬೇಕು ಎಂದು ವಿಧಾನ ಪರಿಷತ್ ಸದಸ್ಯರಾದ ಎಸ್.ವಿ. ಸಂಕನೂರ ಹೇಳಿದರು.

Advertisement

ನಗರದ ಕೆ.ಎಚ್. ಪಾಟೀಲ್ ಜಿಲ್ಲಾ ಕ್ರೀಡಾಂಗಣದಲ್ಲಿ ಶುಕ್ರವಾರ ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಶಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಜರುಗಿದ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳ ಸಮಾರಂಭವನ್ನು ಕ್ರೀಡಾ ಧ್ವಜಾರೋಹಣ ನೆರವೇರಿಸಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಸರ್ಕಾರಿ ನೌಕರರು ದಿನನಿತ್ಯ ಕಚೇರಿ ಕೆಲಸ ನಿರ್ವಹಣೆಯಲ್ಲಿನ ಒತ್ತಡವನ್ನು ಕಡಿಮೆಗೊಳಿಸಲು ದಿವಸದ ಒಂದು ಗಂಟೆಯಾದರೂ ವ್ಯಾಯಾಮಕ್ಕಾಗಿಯೇ ಮೀಸಲಿಡಬೇಕು. ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದರಿಂದ ಒತ್ತಡದಿಂದ ಹೊರಬಂದು ಚೈತನ್ಯದಿಂದ ಕೆಲಸ ನಿರ್ವಹಿಸಲು ಸಹಾಯಕವಾಗುತ್ತದೆ ಎಂದು ನುಡಿದರು.

ಪ್ರಕೃತಿ ವಿಕೋಪದಂತಹ ಕೆಲವು ಸಂದರ್ಭದಲ್ಲಿಯೂ ಸಹ ಸರ್ಕಾರಿ ನೌಕರರು ತಮ್ಮ ಜೀವದ ಹಂಗು ತೊರೆದು ಕಾರ್ಯನಿರ್ವಹಿಸಿದ್ದು ಶ್ಲಾಘನೀಯ ಸಂಗತಿಯಾಗಿದೆ. ಆರೋಗ್ಯವಂತ ನಾಗರಿಕರಿಂದ ಮಾತ್ರ ಆರೋಗ್ಯವಂತ ದೇಶ ನಿರ್ಮಾಣ ಮಾಡಲು ಸಾಧ್ಯ. ಇತ್ತೀಚಿನ ದಿನಮಾನಗಳಲ್ಲಿ ಯುವ ಪೀಳಿಗೆ ಬಿ.ಪಿ, ಮಧುಮೇಹ, ಮಾನಸಿಕ ಒತ್ತಡ ಸೇರಿದಂತೆ ಅನೇಕ ಕಾಯಿಲೆಗಳಿಂದ ಬಳಲುತ್ತಿರುವುದು ವಿಷಾದನೀಯ ಸಂಗತಿ. ಸರ್ಕಾರಿ ನೌಕರರು ಪ್ರತಿನಿತ್ಯ ಯೋಗ, ಕ್ರೀಡೆಯನ್ನು ಹವ್ಯಾಸವಾಗಿಸಿಕೊಂಡು ಆರೋಗ್ಯದ ಕಡೆಗೆ ಗಮನ ಹರಿಸಬೇಕು ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ರಾಷ್ಟಮಟ್ಟದ ಕ್ರೀಡಾಪಟುಗಳನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆಯ ಅಧ್ಯಕ್ಷ ರವಿ ಗುಂಜೀಕರ್, ಪಿ.ಎಚ್.ಕಡಿವಾಳ, ಸತೀಶ ಕಟ್ಟಿಮನಿ, ಅಶೋಕ ಹಾದಿ ಸೇರಿದಂತೆ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕಾ ಘಟಕದ ಅಧ್ಯಕ್ಷರು, ಪದಾಧಿಕಾರಿಗಳು, ವಿವಿಧ ಇಲಾಖೆಯ ಕ್ರೀಡಾಪಟುಗಳು ಹಾಜರಿದ್ದರು.

ವೆಂಕಟೇಶ ಅಲ್ಕೋಡ ನಾಡಗೀತೆ ಪ್ರಸ್ತುತಪಡಿಸಿದರು. ಎಂ.ಎ. ಯರಗುಡಿ ಕಾರ್ಯಕ್ರಮ ನಿರೂಪಿಸಿದರು. ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಕಾರ್ಯದರ್ಶಿ ಕೆ.ಬಿ. ಕೊಣ್ಣೂರ ವಂದಿಸಿದರು.

ಯುವ ಸಬಲೀಕಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಶರಣು ಗೋಗೇರಿ ಸರ್ವರನ್ನು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿ, ಕ್ರೀಡೆಯಲ್ಲಿ ಸೋಲು-ಗೆಲವು ಮುಖ್ಯವಲ್ಲ. ಪಾಲ್ಗೊಳ್ಳುವಿಕೆ ಮುಖ್ಯವಾಗಿದೆ. ಕ್ರೀಡಾಪಟುಗಳು ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡೆಯಲ್ಲಿ ಪಾಲ್ಗೊಂಡು ಕ್ರೀಡಾ ಮನೋಭಾವ ಮೆರೆಯಬೇಕು ಎಂದು ತಿಳಿಸಿದರು.


Spread the love

LEAVE A REPLY

Please enter your comment!
Please enter your name here