ಚಿತ್ರದುರ್ಗ: ಕರ್ನಾಟಕದ ಹಾಸನ ಜಿಲ್ಲೆಯಲ್ಲಿ ಸಂಭವಿಸುತ್ತಿರುವ ಹೃದಯಾಘಾತ ಪ್ರಕರಣಗಳು ಆತಂಕ ಸೃಷ್ಟಿಸಿವೆ. ಇದೀಗ ಹೃದಯಾಘಾತದಿಂದ ವ್ಯಕ್ತಿ ಸಾವನ್ನಪ್ಪಿದ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.
Advertisement
ಚಿತ್ರದುರ್ಗ ತಾಲೂಕಿನ ಸೊಲ್ಲಾಪುರ ನಾಯಕನಹಟ್ಟಿ ಗ್ರಾಮದ ಕಂಪ್ಲೇಶ್ (34) ಸಾವನ್ನಪ್ಪಿದ ವ್ಯಕ್ತಿಯಾಗಿದ್ದು, ರಾತ್ರಿ ಮಲಗಿದ್ದಾಗ ಕಂಪ್ಲೇಶ್‌ಗೆ ಎದೆನೋವು ಕಾಣಿಸಿತ್ತು.
ಎದೆನೋವು ಕಾಣಿಸಿಕೊಂಡ ಹಿನ್ನೆಲೆ ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ಬರುವ ಮಾರ್ಗಮಧ್ಯೆ ಕಂಪ್ಲೇಶ್ ಕೊನೆಯುಸಿರೆಳೆದಿದ್ದಾರೆ. ಬೆಳಗಿನ ಜಾವ 4:30ರ ಸುಮಾರಿಗೆ ಘಟನೆ ನಡೆದಿದೆ.