ಹಾವೇರಿ:- ಜಿಲ್ಲೆಯ ಸವಣೂರು ತಾಲೂಕಿನ ಕಳಲಗೊಂಡ ಗ್ರಾಮದ ಬಳಿ ಆಘಾತಕಾರಿ ಘಟನೆಯೊಂದು ಜರುಗಿದೆ.
Advertisement
ಶಾಲಾ ಬಸ್ ಚಾಲನೆ ವೇಳೆಯೇ ಹೃದಯಾಘಾತದಿಂದ ಚಾಲಕ ಮೃತಪಟ್ಟಿದ್ದಾರೆ. 25 ವರ್ಷದ ಪಕ್ಕಿರೇಶ ಮಲ್ಲೇಶಣ್ಣನವರ್ ಮೃತ ಚಾಲಕ. ಖಾಸಗಿ ಶಾಲೆಯ ಬಸ್ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ ಪಕ್ಕಿರೇಶ ಸಂಜೆ ಶಾಲೆಯಿಂದ ವಾಪಸ್ ಮಕ್ಕಳನ್ನು ಮನೆಗೆ ಡ್ರಾಪ್ ಮಾಡುತ್ತಿದ್ದ ವೇಳೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದೆ.
ಎದೆನೋವು ಕಾಣಿಸಿಕೊಂಡ ಹಿನ್ನೆಲೆ ಚಾಲಕ ರಸ್ತೆಬದಿಯಲ್ಲಿ ಬಸ್ ನಿಲ್ಲಿಸಿದ್ದಾರೆ. ಈ ವೇಳೆ ಮಕ್ಕಳು ಕೂಗಾಡಿ, ಚೀರಾಡಿ ಸ್ಥಳೀಯರನ್ನು ಕರೆದಿದ್ದಾರೆ. ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯದಲ್ಲಿ ಚಾಲಕ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.