ಕಲಬುರಗಿ:– ಕಲಬುರಗಿ ನಗರದಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ ಮೃತಪಟ್ಟ ಘಟನೆ ಜರುಗಿದೆ.
Advertisement
19 ವರ್ಷದ ರವಿಕುಮಾರ್ ಮೃತ ವಿದ್ಯಾರ್ಥಿ. ರವಿ, ನಗರದ ಪಿಡಿಎ ಇಂಜಿನಿಯರಿಂಗ್ ಕಾಲೇಜಿನಲ್ಲಿ 4ನೇ ಸೆಮಿಸ್ಟರ್ ಓದುತ್ತಿದ್ದ ಎಂದು ತಿಳಿದು ಬಂದಿದೆ. ಶನಿವಾರ ಬೆಳಗ್ಗೆ ಮನೆಯಲ್ಲಿಯೇ ಹೃದಯಾಘಾತದಿಂದ ಕುಸಿದು ಬಿದ್ದು ರವಿಕುಮಾರ್ ಸಾವಿಗೀಡಾಗಿದ್ದಾನೆ ಎಂದು ತಿಳಿದು ಬಂದಿದೆ.
ಇತ್ತೀಚೆಗೆ ಚಿಕ್ಕ ವಯಸ್ಸಿನಲ್ಲಿಯೇ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗಿದ್ದು, ಆತಂಕಕ್ಕೀಡು ಮಾಡಿದೆ.