ಹೃದಯಾಘಾತ: ಮುಳಬಾಗಿಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನೀಲಕಂಠೇಗೌಡ ವಿಧಿವಶ!

0
Spread the love

ಕೋಲಾರ:- ಹೃದಯಾಘಾತದಿಂದ ಮುಳಬಾಗಿಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನೀಲಕಂಠೇಗೌಡ ಅವರು ಇಂದು ವಿಧಿವಶರಾಗಿದ್ದಾರೆ.

Advertisement

ಕಳೆದ ರಾತ್ರಿ ಅವರಿಗೆ ತೀವ್ರ ಹೃದಯಾಘಾತವಾಗಿದೆ. ಅವರನ್ನು ಕೂಡಲೇ ಜಾಲಪ್ಪ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ದುರಾದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಇಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ಸಾವನ್ನಪ್ಪಿದ್ದಾರೆ.

ಇನ್ನೂ ನೀಲಕಂಠೇಗೌಡರ ನಿಧನದಿಂದ ತಾಲೂಕಿನ ಕಾಂಗ್ರೆಸ್ ನಾಯಕರಲ್ಲಿ ತಮ್ಮ ನಾಯಕನನ್ನು ಕಳೆದುಕೊಂಡ ಶೋಕ ಮನೆಮಾಡಿದೆ.

ನೀಲಕಂಠೇಗೌಡರು ಈ ಹಿಂದೆ ಮುಳಬಾಗಿಲು ತಾಲೂಕು ಪಂಚಾಯತಿ ಅಧ್ಯಕ್ಷರಾಗಿದ್ದರು. ಸದ್ಯ ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷರಾಗಿ, ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿದ್ದರು. ಮುಳಬಾಗಿಲು ಕಾಂಗ್ರೆಸ್‌ನಲ್ಲಿ ಅವರು ಹಿರಿಯ ನಾಯಕರಾಗಿದ್ದರು ಎನ್ನಲಾಗಿದೆ.


Spread the love

LEAVE A REPLY

Please enter your comment!
Please enter your name here