ಲಕ್ನೋ:- ಉತ್ತರ ಪ್ರದೇಶದಅಲಿಗಢ ಜಿಲ್ಲೆಯ ಸಿರೌಲಿ ಗ್ರಾಮದಲ್ಲಿ ಓಟದ ಅಭ್ಯಾಸ ಮಾಡುತ್ತಿರುವಾಗ 14ರ ಬಾಲಕ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಜರುಗಿದೆ.
Advertisement
ಮೋಹಿತ್ ಚೌಧರಿ ಮೃತ ಬಾಲಕ. ಶಾಲೆಯಲ್ಲಿ ಏರ್ಪಡಿಸಲಾಗಿದ್ದ ಕ್ರೀಡಾ ಸ್ಪರ್ಧೆಗಾಗಿ ಓಟದ ಅಭ್ಯಾಸ ಮಾಡುತ್ತಿರುವಾಗ ಈ ಅವಘಡ ಸಂಭವಿಸಿದೆ.
ಅಧಿಕಾರಿಗಳ ಮಾಹಿತಿ ಪ್ರಕಾರ, ಡಿ.07 ರಂದು ಶಾಲೆಯಲ್ಲಿ ಕ್ರೀಡಾ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಈ ಹಿನ್ನೆಲೆ ಬಾಲಕ ತನ್ನ ಶಾಲಾ ಮೈದಾನದಲ್ಲಿ ಓಟದ ಅಭ್ಯಾಸ ಮಾಡುತ್ತಿದ್ದ. ಆರಂಭದಲ್ಲಿ ತನ್ನ ಸ್ನೇಹಿತರೊಂದಿಗೆ ಎರಡು ಸುತ್ತು ಓಡಿದ.
ಹಾಗೆಯೇ ಮೂರನೇ ಸುತ್ತನ್ನು ಓಡುವಾಗ ನೆಲಕ್ಕೆ ಕುಸಿದು ಬಿದ್ದಿದ್ದಾನೆ. ತಕ್ಷಣ ಆತನ ಸ್ನೇಹಿತರು ಅವರ ಪೋಷಕರಿಗೆ ಕರೆ ಮಾಡಿ, ಮಾಹಿತಿ ನೀಡಿದ್ದಾರೆ. ಕೂಡಲೇ ಆತನನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಆದರೆ ದುರಾದೃಷ್ಟವಶಾತ್ ಅಷ್ಟರಲ್ಲಾಗಲೇ ಪ್ರಾಣಪಕ್ಷಿ ಹಾರಿ ಹೋಗಿತ್ತು.