HomeKarnataka NewsSIR ಕರ್ತವ್ಯಕ್ಕೆ ತೆರಳಿದ್ದ ವೇಳೆ ಹೃದಯಾಘಾತ: BLO ಸಿಬ್ಬಂದಿ ದುರ್ಮರಣ

SIR ಕರ್ತವ್ಯಕ್ಕೆ ತೆರಳಿದ್ದ ವೇಳೆ ಹೃದಯಾಘಾತ: BLO ಸಿಬ್ಬಂದಿ ದುರ್ಮರಣ

For Dai;y Updates Join Our whatsapp Group

ಬೆಂಗಳೂರು: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಕರ್ತವ್ಯಕ್ಕೆ ತೆರಳುತ್ತಿದ್ದ ವೇಳೆ ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಹೃದಯಾಘಾತದಿಂದ ಮೃತಪಟ್ಟಿರುವ ದುರ್ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರು ದಕ್ಷಿಣ ವಿಭಾಗದಲ್ಲಿ ಬಿಎಲ್‌ಒ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ನಟರಾಜ್ ಅವರು, ಭಾನುವಾರ ಬೆಳಗ್ಗೆ ಮನೆಯಿಂದ ಎಸ್‌ಐಆರ್ ಕರ್ತವ್ಯಕ್ಕೆ ತೆರಳುತ್ತಿದ್ದ ವೇಳೆ ಏಕಾಏಕಿ ಹೃದಯಾಘಾತಕ್ಕೊಳಗಾಗಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲು ಯತ್ನಿಸಲಾಯಿತಾದರೂ, ಅಷ್ಟರಲ್ಲೇ ಅವರು ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ಎಸ್‌ಐಆರ್ ಪ್ರಕ್ರಿಯೆ ಹಿನ್ನೆಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅಧಿಕಾರಿಯೊಬ್ಬರ ಸಾವಿನಿಂದ ಸಹೋದ್ಯೋಗಿಗಳಲ್ಲಿ ಹಾಗೂ ಇಲಾಖೆಯಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.

ಇದೇ ಎಸ್‌ಐಆರ್ ಕರ್ತವ್ಯಕ್ಕೆ ತೆರಳುತ್ತಿದ್ದ ವೇಳೆ ತುಮಕೂರು ಜಿಲ್ಲೆಯ ಗೂಳೂರು ಸಮೀಪ ಗ್ರಾಮ ಲೆಕ್ಕಾಧಿಕಾರಿ ಭುವನಾ ಅವರ ದ್ವಿಚಕ್ರ ವಾಹನಕ್ಕೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದರು.

ಆ ಘಟನೆಯ ಬೆನ್ನಲ್ಲೇ ಇದೀಗ ಎಸ್‌ಐಆರ್ ಕರ್ತವ್ಯಕ್ಕೆ ತೆರಳುತ್ತಿದ್ದ ಬಿಎಲ್‌ಒ ನಟರಾಜ್ ಹೃದಯಾಘಾತದಿಂದ ಮೃತಪಟ್ಟಿರುವುದು ದುಃಖದ ಸಂಗತಿಯಾಗಿದ್ದು, ಸತತ ಎರಡನೇ ದಿನ ಎಸ್‌ಐಆರ್ ಕರ್ತವ್ಯಕ್ಕೆ ಸಂಬಂಧಿಸಿದಂತೆ ಅಧಿಕಾರಿಯೊಬ್ಬರು ಜೀವ ಕಳೆದುಕೊಂಡಿರುವ ಘಟನೆ ಗಮನ ಸೆಳೆದಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img