ಕೊಪ್ಪಳ:- ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಹಿರೇಬೆನಕಲ್‌ನಲ್ಲಿ ಏಕಾಏಕಿ ಎದೆನೋವು ಕಾಣಿಸಿಕೊಂಡು ಯೋಗ ಶಿಕ್ಷಕರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಜರುಗಿದೆ. ಶಾಂತವೀರ ಸ್ವಾಮಿ ಗಂಗಾಧರ ಮಠ ಮೃತ ಯೋಗ ಶಿಕ್ಷಕ.
Advertisement
ಹಿರೇಬೆನಕಲ್ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಯ ಹಾಗೂ ಯೋಗ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಶುಕ್ರವಾರ ಬೆಳಗಿನ ಜಾವ ಎದೆನೋವು ಕಾಣಿಸಿಕೊಂಡ ಹಿನ್ನೆಲೆ ಹುಬ್ಬಳ್ಳಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ