ಕಲಬುರಗಿ:- ಹೈದ್ರಾಬಾದ್ʼನಲ್ಲಿ ಮನಕಲಕುವ ಘಟನೆ ನಡೆದಿದ್ದು, ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ನಿಗೂಢವಾಗಿ ಸಾವನ್ನಪ್ಪಿದ್ದಾರೆ. ನರಸಿಂಹ (60), ಪತ್ನಿ ವೆಂಕಟಮ್ಮ (55), ಮಗ ಅನಿಲ್ (32), ಮಗಳು ಕವಿತಾ (24) ಹಾಗೂ ಮೊಮ್ಮಗ ಅಪ್ಪು ಮೃತರು.
Advertisement
ಹೈದರಾಬಾದಿನ ಮನೆಯಲ್ಲಿಯೇ ನಿಗೂಢವಾಗಿ ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಮೃತಪಟ್ಟಿದ್ದರು. ಪ್ರಾಥಮಿಕ ಮಾಹಿತಿಯ ಪ್ರಕಾರ, ಆರ್ಥಿಕ ಸಂಕಷ್ಟದಿಂದಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂಬ ಶಂಕೆ ವ್ಯಕ್ತವಾಗಿದೆ.
ಇನ್ನು ಗ್ರಾಮಸ್ಥರೆಲ್ಲ ಸೇರಿ ಹಣ ಸಂಗ್ರಹಿಸಿ, ಮೃತದೇಹಗಳನ್ನು ಗ್ರಾಮಕ್ಕೆ ತೆಗೆದುಕೊಂಡು ಬಂದಿದ್ದು, ಅಂತ್ಯಸಂಸ್ಕಾರಕ್ಕೆ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.