HomeKarnataka Newsಚಿಕ್ಕಬಳ್ಳಾಪುರದಲ್ಲಿ ಹೃದಯವಿದ್ರಾವಕ ಘಟನೆ: ಈಶಾ ಆದಿಯೋಗಿ ದರ್ಶನ ಮುಗಿಸಿ ಬರುತ್ತಿದ್ದ ಯುವಕ-ಯುವತಿ ದಾರುಣ ಅಂತ್ಯ!

ಚಿಕ್ಕಬಳ್ಳಾಪುರದಲ್ಲಿ ಹೃದಯವಿದ್ರಾವಕ ಘಟನೆ: ಈಶಾ ಆದಿಯೋಗಿ ದರ್ಶನ ಮುಗಿಸಿ ಬರುತ್ತಿದ್ದ ಯುವಕ-ಯುವತಿ ದಾರುಣ ಅಂತ್ಯ!

For Dai;y Updates Join Our whatsapp Group

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ತಾಲೂಕಿನ ಲಿಂಗಶೆಟ್ಟಿಪುರ ಗೇಟ್ ಬಳಿ ಲಾರಿ ಡಿಕ್ಕಿಯಾಗಿ ಬೈಕ್‌ನಲ್ಲಿ ತೆರಳುತ್ತಿದ್ದ ಯುವಕ ಮತ್ತು ಯುವತಿ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ.

ಮೃತರು ಉತ್ತರ ಪ್ರದೇಶ ಮೂಲದವರಾಗಿದ್ದು, ಚಿಕ್ಕಬಳ್ಳಾಪುರ ಸಮೀಪದ ಈಶಾ ಆದಿಯೋಗಿ ದರ್ಶನ ಪಡೆದು ಬೈಕ್‌ನಲ್ಲಿ ವಾಪಸ್ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.

ಲಿಂಗಶೆಟ್ಟಿಪುರ ಗೇಟ್ ಬಳಿ ವೇಗವಾಗಿ ಬಂದ ಲಾರಿಯೊಂದು ಬೈಕ್‌ಗೆ ಭೀಕರವಾಗಿ ಡಿಕ್ಕಿ ಹೊಡೆದ ಪರಿಣಾಮ ಅಪಘಾತದ ತೀವ್ರತೆಗೆ ಇಬ್ಬರೂ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಘಟನೆ ಬಳಿಕ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಈ ಸಂಬಂಧ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಲಾರಿ ಚಾಲಕನ ವಿರುದ್ಧ ಮುಂದಿನ ತನಿಖೆ ಮುಂದುವರಿದಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img