ಹೃದಯವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ!

0
Spread the love

ಬೆಂಗಳೂರು: ಇಬ್ಬರು ಪುಟ್ಟ ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ನಗರದ ಬಾಗಲಗುಂಟೆ ಸಮೀಪದ ಭುವನೇಶ್ವರಿ ನಗರದಲ್ಲಿ ನಡೆದಿದೆ. ಮೃತರನ್ನು ವಿಜಯಲಕ್ಷ್ಮಿ ಹಾಗೂ ಆಕೆಯ ಇಬ್ಬರು ಮಕ್ಕಳು ಭುವನ್ (1.5 ವರ್ಷ) ಮತ್ತು ವೃಂದಾ (4 ವರ್ಷ) ಎಂದು ಗುರುತಿಸಲಾಗಿದೆ.

Advertisement

ರಾಯಚೂರು ಮೂಲದ ದಂಪತಿಗಳು ಐದು ವರ್ಷಗಳ ಹಿಂದೆ ಮದುವೆಯಾಗಿದ್ದು, ಪ್ರಸ್ತುತ ಭುವನೇಶ್ವರಿ ನಗರದಲ್ಲಿ ವಾಸಿಸುತ್ತಿದ್ದರು. ಗಂಡ ಖಾಸಗಿ ಮಾಲ್ನಲ್ಲಿ ಕೆಲಸ ಮಾಡುತ್ತಿದ್ದರೆ, ವಿಜಯಲಕ್ಷ್ಮಿ ಮನೆಯಲ್ಲೇ ಇರುತ್ತಿದ್ದರು. ನಿನ್ನೆ ಸಂಜೆ ವಿಜಯಲಕ್ಷ್ಮಿಯ ತಂಗಿ ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ.

ಇಬ್ಬರು ಮಕ್ಕಳನ್ನು ಕೊಂದು ಬಳಿಕ ವಿಜಯಲಕ್ಷ್ಮಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಸಾವಿನ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಕೌಟುಂಬಿಕ ಕಲಹವೇ ಹಿನ್ನೆಲೆ ಇರಬಹುದು ಎಂದು ಪೊಲೀಸರು ಶಂಕಿಸುತ್ತಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ವಿಕ್ಟೋರಿಯಾ ಆಸ್ಪತ್ರೆಗೆ ಕಳುಹಿಸಲಾಗಿದೆ. ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.


Spread the love

LEAVE A REPLY

Please enter your comment!
Please enter your name here