HomeIndia Newsಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆದರೆ, ಉಗುಳಿದರೆ ಭಾರಿ ದಂಡ; ಸೆಪ್ಟೆಂಬರ್ 1ರಿಂದ ಹೊಸ ನಿಯಮ ಜಾರಿ

ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆದರೆ, ಉಗುಳಿದರೆ ಭಾರಿ ದಂಡ; ಸೆಪ್ಟೆಂಬರ್ 1ರಿಂದ ಹೊಸ ನಿಯಮ ಜಾರಿ

For Dai;y Updates Join Our whatsapp Group

Spread the love

ಕೊಲ್ಕತ್ತಾ: ಸಾರ್ವಜನಿಕ ಸ್ಥಳಗಳ ಸ್ವಚ್ಛತೆ ಮತ್ತು ಸೌಂದರ್ಯ ಕಾಪಾಡುವ ಉದ್ದೇಶದಿಂದ ಪಶ್ಚಿಮ ಬಂಗಾಳ ಸರ್ಕಾರ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿದ್ದು, ರಸ್ತೆ, ಉದ್ಯಾನವನ ಹಾಗೂ ಇತರೆ ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವ ಮತ್ತು ಉಗುಳುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದೆ. ಹೊಸ ನಿಯಮಗಳು ಸೆಪ್ಟೆಂಬರ್ 1ರಿಂದ ಜಾರಿಗೆ ಬರಲಿವೆ.

ರಾಜ್ಯದ ಪ್ರಮುಖ ನಗರಗಳು ಹಾಗೂ ಪ್ರವಾಸಿ ತಾಣಗಳಲ್ಲಿ ಸಾರ್ವಜನಿಕರು ಎಲ್ಲೆಂದರಲ್ಲಿ ಕಸ ಎಸೆಯುವುದು ಮತ್ತು ಗುಟ್ಕಾ, ಪಾನ್ ಸೇವಿಸಿ ರಸ್ತೆ ಹಾಗೂ ಗೋಡೆಗಳ ಮೇಲೆ ಉಗುಳುವುದು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಇಂತಹ ಚಟುವಟಿಕೆಗಳಿಂದ ನಗರಗಳ ಸೌಂದರ್ಯ ಹಾಳಾಗುವುದರ ಜೊತೆಗೆ ಸಾಂಕ್ರಾಮಿಕ ರೋಗಗಳ ಹರಡುವಿಕೆಯ ಭೀತಿಯೂ ಹೆಚ್ಚುತ್ತಿದೆ ಎಂದು ಸರ್ಕಾರ ತಿಳಿಸಿದೆ.

ಹೊಸ ನಿಯಮದ ಪ್ರಕಾರ, ರಸ್ತೆ, ಫುಟ್‌ಪಾತ್, ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ, ಉದ್ಯಾನವನ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವುದು ಅಥವಾ ಉಗುಳುವುದು ಕಂಡುಬಂದರೆ ಸಂಬಂಧಿತ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಸ್ಥಳದಲ್ಲೇ ದಂಡ ವಿಧಿಸಲಿದ್ದಾರೆ.

ನಿಯಮಗಳ ಪರಿಣಾಮಕಾರಿ ಜಾರಿಗೆ ಪ್ರಮುಖ ರಸ್ತೆಗಳು ಹಾಗೂ ಜನಸಂದಣಿ ಪ್ರದೇಶಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳ ಮೂಲಕ ನಿಗಾ ವಹಿಸಲಾಗುತ್ತದೆ. ನಿಯಮ ಉಲ್ಲಂಘಿಸುವವರನ್ನು ಗುರುತಿಸಿ ದಂಡದ ನೋಟಿಸ್ ಕಳುಹಿಸುವ ವ್ಯವಸ್ಥೆಯನ್ನೂ ರೂಪಿಸಲಾಗಿದೆ.

ಮೊದಲ ಬಾರಿಗೆ ತಪ್ಪು ಮಾಡಿದವರಿಗೆ ನಿಗದಿತ ದಂಡ ವಿಧಿಸಲಾಗುವುದು. ಅದೇ ವ್ಯಕ್ತಿ ಮತ್ತೆ ನಿಯಮ ಉಲ್ಲಂಘಿಸಿದರೆ ದಂಡದ ಮೊತ್ತವನ್ನು ಹೆಚ್ಚಿಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ನಿಯಮವನ್ನು ಜಾರಿಗೊಳಿಸಲು ಕೊಲ್ಕತ್ತಾ ಮುನ್ಸಿಪಲ್ ಕಾರ್ಪೊರೇಷನ್ ಸೇರಿದಂತೆ ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಪಂಚಾಯಿತಿಗಳಿಗೆ ಅಗತ್ಯ ಅಧಿಕಾರ ನೀಡಲಾಗಿದೆ. ವಾಣಿಜ್ಯ ಸಂಕೀರ್ಣಗಳು, ಮಾರುಕಟ್ಟೆಗಳು, ಹೋಟೆಲ್‌ಗಳು ಮತ್ತು ಇತರೆ ವ್ಯಾಪಾರ ಕೇಂದ್ರಗಳ ಸುತ್ತಮುತ್ತ ಸ್ವಚ್ಛತೆ ಕಾಪಾಡದ ಮಾಲೀಕರ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಲಾಗಿದೆ.

ಇದೇ ವೇಳೆ, ಸೆಪ್ಟೆಂಬರ್ 1ರಿಂದ ದಂಡ ಪ್ರಕ್ರಿಯೆ ಆರಂಭವಾಗುವ ಮುನ್ನ ಇಡೀ ಆಗಸ್ಟ್ ತಿಂಗಳಲ್ಲಿ ರಾಜ್ಯಾದ್ಯಂತ ವಿಶೇಷ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲು ಸರ್ಕಾರ ಯೋಜಿಸಿದೆ. ಮೈಕ್‌ಗಳ ಮೂಲಕ ಪ್ರಚಾರ, ಪೋಸ್ಟರ್‌ಗಳು ಹಾಗೂ ಸಾಮಾಜಿಕ ಜಾಲತಾಣಗಳ ಮೂಲಕ ಜನರಿಗೆ ಹೊಸ ನಿಯಮಗಳ ಕುರಿತು ಮಾಹಿತಿ ನೀಡಲಾಗುವುದು.

ಸಾರ್ವಜನಿಕ ಸ್ಥಳಗಳ ಸ್ವಚ್ಛತೆ ಕಾಪಾಡುವುದು ಮತ್ತು ಆರೋಗ್ಯಕರ ವಾತಾವರಣ ನಿರ್ಮಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!