HomeKarnataka Newsಕರ್ನಾಟಕದಲ್ಲಿ ಮುಂದಿನ 2-3 ದಿನಗಳ ಕಾಲ ಮುಂಗಾರು ಮಳೆಯ ಅಬ್ಬರ: ಹವಾಮಾನ ಇಲಾಖೆ

ಕರ್ನಾಟಕದಲ್ಲಿ ಮುಂದಿನ 2-3 ದಿನಗಳ ಕಾಲ ಮುಂಗಾರು ಮಳೆಯ ಅಬ್ಬರ: ಹವಾಮಾನ ಇಲಾಖೆ

For Dai;y Updates Join Our whatsapp Group

Spread the love

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಮತ್ತಷ್ಟು ಚುರುಕುಗೊಂಡಿದ್ದು, ಮುಂದಿನ ಎರಡು ರಿಂದ ಮೂರು ದಿನಗಳ ಅವಧಿಯಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹವಾಮಾನ ಇಲಾಖೆಯ ಪ್ರಕಾರ, ಉತ್ತರ ಒಳನಾಡು, ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ವ್ಯಾಪಕ ಮಳೆಯಾಗುವ ನಿರೀಕ್ಷೆ ಇದೆ. ರಾಜ್ಯದ ವಿವಿಧ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಉತ್ತಮ ಮಳೆಯಾಗುವ ಸಾಧ್ಯತೆ ಇದೆ.

ಕರಾವಳಿ ಜಿಲ್ಲೆಗಳಾದ ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದ್ದು, ಉತ್ತರ ಕನ್ನಡ ಜಿಲ್ಲೆಯಲ್ಲಿ ಸಾಧಾರಣದಿಂದ ಮಧ್ಯಮ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಭಾಗದಲ್ಲಿ ಮೀನುಗಾರರು ಹಾಗೂ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ.

ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು ಹಾಗೂ ತುಮಕೂರು ಜಿಲ್ಲೆಗಳಲ್ಲಿಯೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕೆಲವೆಡೆ ಬಿರುಗಾಳಿ ಸಹಿತ ಮಳೆಯಾಗುವ ನಿರೀಕ್ಷೆಯಿದ್ದು, ರೈತರು ಹಾಗೂ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ರಾಜಧಾನಿ ಬೆಂಗಳೂರಿನಲ್ಲಿ ಬೆಳಗ್ಗಿನಿಂದಲೇ ಮೋಡ ಕವಿದ ವಾತಾವರಣ ಕಂಡುಬಂದಿದ್ದು, ದಿನದ ವೇಳೆ ಹಲವು ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ನಗರದ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ನಿರೀಕ್ಷೆ ಇದೆ.

ಇದೇ ವೇಳೆ, ನಗರದಲ್ಲಿ ಗಂಟೆಗೆ ಸುಮಾರು 20 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದ್ದು, ಮಳೆಯೊಂದಿಗೆ ತಾಪಮಾನದಲ್ಲಿ ಸ್ವಲ್ಪ ಇಳಿಕೆ ಕಂಡುಬರಬಹುದು ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!