ಬೆಂಗಳೂರು:- ರಾಜಧಾನಿ ಬೆಂಗಳೂರಿನಲ್ಲಿ ರಾತ್ರಿ ಭಾರೀ ಮಳೆ ಸುರಿದಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ರಾತ್ರಿ ಮಳೆ ಸುರಿದಿದೆ.
ಮಲ್ಲೇಶ್ವರಂ, ರಾಜಾಜಿನಗರ, ಚಂದ್ರ ಲೇಔಟ್, ಯಶವಂತಪುರ, ಕಾರ್ಪೋರೇಶನ್, ಚಾಮರಾಜಪೇಟೆ, ಪ್ಯಾಲೇಸ್ ಗುಟ್ಟಹಳ್ಳಿ, ಮಹಾಲಕ್ಷ್ಮೀ ಲೇಔಟ್, ಗೊರಗುಂಟೆಪಾಳ್ಯ,ಪೀಣ್ಯ, ಮತ್ತಿಕೇರೆ ಸೇರಿದಂತೆ ಹಲವೆಡೆ ಭಾರೀ ಮಳೆಯಾಗಿದೆ.
ಮಳೆಯಿಂದಾಗಿ ಹಲವೆಡೆ ಟ್ರಾಫಿಕ್ ಜಾಮ್ ಉಂಟಾಗಿದ್ದು ಫ್ಲೈ ಓವರ್, ಅಂಡರ್ ಪಾಸ್ ಕೆಳಗೆ ದ್ವಿಚಕ್ರ ವಾಹನ ಸವಾರರು ನಿಂತಿದ್ದರು.
ನಾಳೆ ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೆಳಗಾವಿ, ಬೀದರ್ ಸೇರಿದಂತೆ ಹಲವು ಜಿಲ್ಲೆಗಳಿಗೆ ಹವಮಾನ ಇಲಾಖೆ ಅಲರ್ಟ್ ಘೋಷಿಸಿದೆ.



