ಬೆಂಗಳೂರು:- ಬೇಸಿಗೆಯ ಬಿರು ಬಿಸಿಲಿನಿಂದ ದಣಿದಿದ್ದ ರಾಜ್ಯದ ಜನರಿಗೆ ಕಳೆದ ಎರಡು ದಿನದಿಂದ ಸುರಿದ ಮಳೆ ಕೊಂಚ ನೆಮ್ಮದಿ ತಂದಿದೆ. ಇದೀಗ ಈ ಮಳೆ ಇನ್ನೂ ಎರಡು ದಿನ ಭಾರೀ ಪ್ರಮಾಣದಲ್ಲಿ ಆಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬೆಳಗಾವಿ, ಧಾರವಾಡ, ದಾವಣಗೆರೆ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ತುಮಕೂರು, ಮಂಡ್ಯ ಮತ್ತು ಚಾಮರಾಜನಗರದಲ್ಲಿ ಮಳೆ ಆಗಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಇನ್ನೂ ರಾಜ್ಯದ ಹಲವಾರು ಭಾಗಗಳಲ್ಲಿ ಬುಧವಾರ ಭಾರೀ ಮಳೆಯಾಗಿದ್ದು, ವಾಹನ ಸವಾರರು ಪರದಾಟ ನಡೆಸಿದ ದೃಶ್ಯವೂ ಕಂಡು ಬಂತು.



