HomeKarnataka Newsರಾಜ್ಯಾದ್ಯಂತ ಭಾರೀ ಮಳೆ ಮುನ್ಸೂಚನೆ: ಹವಾಮಾನ ಇಲಾಖೆ ಎಚ್ಚರಿಕೆ!

ರಾಜ್ಯಾದ್ಯಂತ ಭಾರೀ ಮಳೆ ಮುನ್ಸೂಚನೆ: ಹವಾಮಾನ ಇಲಾಖೆ ಎಚ್ಚರಿಕೆ!

For Dai;y Updates Join Our whatsapp Group

Spread the love

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರ ಸುರಿದ ಭಾರೀ ಮಳೆ ಜನಜೀವನ ಅಸ್ತವ್ಯಸ್ತಗೊಳಿಸಿದ್ದು, ಹಲವೆಡೆ ರಸ್ತೆಗಳು ಜಲಾವೃತವಾಗಿ ಅಪಾರ್ಟ್‌ಮೆಂಟ್‌ಗಳಿಗೆ ನೀರು ನುಗ್ಗಿದ ಘಟನೆಗಳು ವರದಿಯಾಗಿವೆ.

ಇದೇ ವೇಳೆ ಇಂದು ಕೂಡ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಯೆಲ್ಲೋ ಹಾಗೂ ಆರೆಂಜ್‌ ಅಲರ್ಟ್‌ ಘೋಷಿಸಿದೆ. ಕೊಪ್ಪಳ, ಧಾರವಾಡ, ಗದಗ, ವಿಜಯನಗರ, ಹಾವೇರಿ, ದಾವಣಗೆರೆ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ.

ಇನ್ನು ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಬಳ್ಳಾರಿ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆ ಇದ್ದು, ಗುಡುಗು, ಮಿಂಚು ಹಾಗೂ ಆಲಿಕಲ್ಲು ಸಹಿತ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಹಾಸನ, ಚಾಮರಾಜನಗರ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ವಿಶೇಷ ಕಟ್ಟೆಚ್ಚರ ವಹಿಸಲು ಸೂಚಿಸಲಾಗಿದೆ.

ಇದೇ ವೇಳೆ ರಾಜ್ಯದ ಹಲವೆಡೆ ಉಷ್ಣಾಂಶವೂ ಏರಿಕೆಯಾಗಿದ್ದು, ಕಲಬುರಗಿಯಲ್ಲಿ ಗರಿಷ್ಠ 42.4 ಡಿಗ್ರಿ ಸೆಲ್ಸಿಯಸ್‌ ತಾಪಮಾನ ದಾಖಲಾಗಿದೆ. ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ತಾಪಮಾನ ಸಾಮಾನ್ಯಕ್ಕಿಂತ 1.6 ರಿಂದ 3 ಡಿಗ್ರಿವರೆಗೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ವರದಿ ತಿಳಿಸಿದೆ.

ಭಾರೀ ಮಳೆ ಮತ್ತು ಗಾಳಿಯಿಂದ ಕೆಲವೆಡೆ ವಿದ್ಯುತ್‌ ಸಂಪರ್ಕ ಕಡಿತವಾಗುವ ಹಾಗೂ ರಸ್ತೆಗಳು ಜಲಾವೃತಗೊಂಡು ಟ್ರಾಫಿಕ್‌ ಸಮಸ್ಯೆ ಉಂಟಾಗುವ ಆತಂಕವಿದೆ. ಹೀಗಾಗಿ ಮಳೆ ವೇಳೆ ಮನೆಯೊಳಗೇ ಇರಲು, ಅನಗತ್ಯ ಪ್ರಯಾಣ ತಪ್ಪಿಸಲು ಹಾಗೂ ಮರಗಳ ಕೆಳಗೆ ಆಶ್ರಯ ಪಡೆಯದಂತೆ ಹವಾಮಾನ ಇಲಾಖೆ ಸಾರ್ವಜನಿಕರಿಗೆ ಸೂಚನೆ ನೀಡಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!