ಕೊಡಗು:- ಕರ್ನಾಟಕದಲ್ಲಿ ಮುಂಗಾರು ಅಬ್ಬರ ಹೆಚ್ಚಾಗಿದ್ದು, ರಾಜ್ಯದ ಹಲವೆಡೆ ಭಾರೀ ಮಳೆ ಆಗುತ್ತಿದೆ. ಅದರಂತೆ ಕೊಡಗು ಜಿಲ್ಲೆಯಲ್ಲಿಯೂ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆ ನಾಳೆಯೂ ಇಲ್ಲಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜಾ ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಶಾಲೆಗಳು, ಪ್ರೌಢಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ನಾಳೆ ರಜೆ ಇರುತ್ತದೆ. ಕಳೆದ ಕೆಲ ದಿನಗಳಿಂದ ಕೊಡಗಿನಲ್ಲಿ ನಿರಂತರವಾಗಿ ಜೋರಾದ ಮಳೆ ಬೀಳುತ್ತಿದ್ದು, ಕೆಲವೆಡೆ ನೀರಿನ ಹರಿವು ಹೆಚ್ಚಾಗಿರುವುದರಿಂದ ವಿದ್ಯಾರ್ಥಿಗಳ ಸುರಕ್ಷತೆಯನ್ನು ಮನಗಂಡು ಈ ತೀರ್ಮಾನ ಕೈಗೊಳ್ಳಲಾಗಿದೆ.
ಜಿಲ್ಲಾಡಳಿತದ ಸೂಚನೆಯಂತೆ, ನದಿಗಳ ನೀರಿನ ಮಟ್ಟ ಏರಿಕೆಯಾಗುತ್ತಿರುವುದು, ರಸ್ತೆ ಸಂಚಾರ ವ್ಯತ್ಯಯಗೊಳ್ಳುವ ಸಂಭವ ಹಾಗೂ ಕೊಚ್ಚಿಕೊಳ್ಳುವ ಅಪಾಯಗಳ ಹಿನ್ನೆಲೆಯಲ್ಲಿ, ಮಕ್ಕಳು ಹಾಗೂ ವಿದ್ಯಾರ್ಥಿಗಳಿಗೆ ಯಾವುದೇ ಅಪಾಯ ಉಂಟಾಗದಂತೆ ರಜೆ ಘೋಷಿಸಲಾಗಿದೆ.