ಹಾಸನ:- ಧಾರಕಾರ ಮಳೆ ಹಿನ್ನೆಲೆ ಹಾಸನ ಹಾಗೂ ಉತ್ತರ ಕನ್ನಡ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಿಸಿ ಆಯಾ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ನಾಳೆ ಹಾಸನ ಜಿಲ್ಲೆಯ ಮೂರು ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಸಕಲೇಶಪುರ, ಆಲೂರು, ಅರಕಲಗೂಡು ತಾಲ್ಲೂಕುಗಳ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಡ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಡಿಸಿ ಕೆ.ಎಸ್ ಲತಾಕುಮಾರಿ ಆದೇಶ ಹೊರಡಿಸಿದ್ದಾರೆ. ಇದರಲ್ಲಿ ಸಕಲೇಶಪುರ ತಾಲ್ಲೂಕಿನ, ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಹಾಗೂ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಉತ್ತರ ಕನ್ನಡದಲ್ಲೂ ಶಾಲೆಗಳಿಗೆ ರಜೆ:
ಮಳೆಯ ಆರ್ಭಟ ಜೋರಾದ ಹಿನ್ನೆಲೆ ಉತ್ತರ ಕನ್ನಡ ಜಿಲ್ಲೆಯ ಎರಡು ತಾಲೂಕುಗಳ ಶಾಲೆ, ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜೋಯಿಡಾ, ದಾಂಡೇಲಿ ತಾಲೂಕಿನ ಶಾಲೆ, ಅಂಗನವಾಡಿ ಕೇಂದ್ರಗಳಿಗೆ ಜೂ. 26 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಆದೇಶ ಹೊರಡಿಸಿದ್ದಾರೆ.