ಧಾರಕಾರ ಮಳೆ: ನಾಳೆ ಉತ್ತರ ಕನ್ನಡದ 8 ತಾಲೂಕುಗಳ ಶಾಲೆಗಳಿಗೆ ರಜೆ!

0
Spread the love

ಕಾರವಾರ:- ಕರ್ನಾಟಕದಲ್ಲಿ ಮುಂಗಾರು ಚುರುಕುಗೊಂಡಿದ್ದು, ಹಲವು ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಜೋರಾಗಿದೆ. ಅದರಂತೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ನಾಳೆ 8 ತಾಲೂಕುಗಳ ಅಂಗನವಾಡಿ, ಪ್ರಾಥಮಿಕ ಶಾಲೆ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

Advertisement

ಜಿಲ್ಲೆಯ ಕುಮಟಾ,‌ ಕಾರವಾರ, ಅಂಕೋಲಾ, ಹೊನ್ನಾವರ, ಭಟ್ಕಳ, ಶಿರಸಿ,‌ ಸಿದ್ದಾಪುರ, ಯಲ್ಲಾಪುರ ತಾಲೂಕಿನ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಅವರು ಆದೇಶಿಸಿದ್ದಾರೆ. ಜಿಲ್ಲೆಯ ಈ 8 ತಾಲೂಕುಗಳಲ್ಲಿ ಭಾರೀ ಮಳೆಯಾಗುತ್ತಿದೆ. ಇದರಿಂದ ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿವೆ. ಹೀಗಾಗಿ ಮುಂಜಾಗ್ರತೆಯಿಂದ ಜಿಲ್ಲಾಡಳಿತ ಈ ಕ್ರಮ ಕೈಗೊಂಡಿದೆ.


Spread the love

LEAVE A REPLY

Please enter your comment!
Please enter your name here