ಬೆಂಗಳೂರು:- ನಗರದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಭಾರೀ ಮಳೆ ಆಗುತ್ತಿದ್ದು, ಸಾಕಷ್ಟು ಅವಾಂತರ ಸೃಷ್ಟಿ ಆಗಿದೆ. ಮಳೆಯ ಕಾರಣದಿಂದ ಬೆಂಗಳೂರಿನಲ್ಲಿ ಕಳೆದ ಮೇ 17 ರಂದು ನಡೆಯಬೇಕಿದ್ದ RCB Vs KKR ಪಂದ್ಯವೂ ಕೂಡ ನಿಂತಿತ್ತು. ಆದರೆ ಮಳೆ ಸಧ್ಯಕ್ಕೆ ನಿಲ್ಲುವ ಲಕ್ಷಣ ಕಾಣುತ್ತಿಲ್ಲ. ಹೀಗಾಗಿ ಮೇ. 23 ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಬೇಕಿರುವ RCB ಮ್ಯಾಚ್ ಇದೀಗ ಲಕ್ನೋಗೆ ಶಿಫ್ಟ್ ಆಗಿದೆ.
ಎಸ್, ಬೆಂಗಳೂರಿನಲ್ಲಿ ಕಳೆದ ಕೆಲವು ದಿನಗಳಿಂದ ವರುಣನ ಅಬ್ಬರ ಜೋರಾಗಿದ್ದು, ಮೇ 24ರ ವರೆಗೆ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹೀಗಾಗಿ ಮೇ 23ರಂದು ಆರ್‌ಸಿಬಿ ತನ್ನ ತವರೂರಲ್ಲಿ ಆಡಬೇಕಿದ್ದ ಲೀಗ್‌ನ ಕೊನೆಯ ಪಂದ್ಯ ಸ್ಥಳಾಂತರಗೊಂಡಿದೆ. ಮೇ 23ರಂದು ಲಕ್ನೋದ ಏಕನಾ ಕ್ರೀಡಾಂಗಣದಲ್ಲಿ ಆರ್‌ಸಿಬಿ ಹಾಗೂ ಎಸ್‌ಆರ್‌ಹೆಚ್ ತಂಡಗಳು ಮುಖಾಮುಖಿಯಾಗಲಿವೆ.
ಈಗಾಗಲೇ 12 ಪಂದ್ಯಗಳನ್ನಾಡಿರುವ ಆರ್‌ಸಿಬಿ 8 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದು, 17 ಅಂಕ ಗಳಿಸಿ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದೆ. ಪ್ಲೇ ಆಫ್‌ಗೆ ಎಂಟ್ರಿ ಕೊಟ್ಟಿರೋ ಆರ್‌ಸಿಬಿ ನಂ.1 ಪಟ್ಟಕ್ಕಾಗಿ ಹಣಾಹಣಿ ನಡೆಸುತ್ತಿದೆ.