ಮಂಗಳೂರು:- ಧಾರಾಕಾರ ಮಳೆ ಹಿನ್ನೆಲೆ ನಾಳೆ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
Advertisement
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಿಸಿದ್ದು, ಭಾರೀ ಮಳೆಯಾಗುವ ಸಾಧ್ಯತೆ ಹಿನ್ನೆಲೆ ಅಂಗನವಾಡಿಯಿಂದ ದ್ವಿತೀಯ ಪಿಯುಸಿವರೆಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ. ಸರ್ಕಾರಿ, ಅನುದಾನಿತ, ಖಾಸಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಆದೇಶ ಹೊರಡಿಸಿದ್ದಾರೆ.
ಕೊಡಗಿನಲ್ಲೂ ರಜೆ ಘೋಷಣೆ:
ಕೊಡಗು ಜಿಲ್ಲೆಯಲ್ಲಿ ನಾಳೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುನ್ನಚ್ಚೆರಿಕಾ ಕ್ರಮವಾಗಿ ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜಾ ನಾಳೆ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಪದವಿ ಪೂರ್ಜ ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ.