ಹುಬ್ಬಳ್ಳಿ:- ನಗರದಲ್ಲಿ ಭಾನುವಾರ ರಾತ್ರಿ ಗುಡುಗು ಸಹಿತ ಭಾರೀ ಮಳೆ ಸುರಿದಿದ್ದು, ಈ ವೇಳೆ ಸಿಡಿಲು ಬಡಿದು ವೃದ್ಧನೋರ್ವ ಸಾವನ್ನಪ್ಪಿದ್ದಾನೆ.
ಧಾರವಾಡ ತಾಲೂಕಿನ ಮುಗದ ಗ್ರಾಮದ ಹೊಲದಲ್ಲಿ ಘಟನೆ ನಡೆದಿದೆ. 62 ವರ್ಷದ ರಸೂಲಸಾಬ್ ಚಾಂದವಾಲೆ ಮೃತ ದುರ್ದೈವಿ. ನಿನ್ನೆ ಸಂಜೆ ಮೇಕೆ ಮೇಯಿಸಿಕೊಂಡು ವಾಪಸ್ ಮುಗದ ಗ್ರಾಮಕ್ಕೆ ಬರುವಾಗ ಸಿಡಿಲು ಬಡಿದಿದೆ. ಧಾರವಾಡ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಇನ್ನೂ ನಿನ್ನೆ ರಾತ್ರಿ ಹುಬ್ಬಳ್ಳಿಯ ನವನಗರ, ವಿದ್ಯಾನಗರ, ದೇಶಪಾಂಡೆ ನಗರದಲ್ಲಿ ಗುಡುಗು ಸಿಡಿಲು ಸಹಿತ ಮಳೆಯಾಗಿದೆ. ಕೇಶ್ವಾಪುರದ ಕೆಲವು ಕಡೆ ಸಣ್ಣ ಪ್ರಮಾಣದ ಆಲಿಕಲ್ಲು ಸಹಿತ ಮಳೆಯಾಗಿದ್ದು, ಮಳೆ ಹಿನ್ನೆಲೆ ಹುಬ್ಬಳ್ಳಿ ನಗರದ ವಿದ್ಯುತ್ ಕಡಿತಗೊಂಡಿತು. ಸತತ ಎರಡು ಗಂಟೆಗಳ ಕಾಲ ಸುರಿದ ಭಾರಿ ಮಳೆಗೆ ಚರಂಡಿ ತುಂಬಿ ಕೊಳಚೆ ನೀರು ಮುಖ್ಯ ರಸ್ತೆಗೆ ಹರಿದಿತ್ತು. ಅಲ್ಲದೇ ಪ್ರಮುಖ ರಸ್ತೆಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿದೆ.