ಕಲಬುರ್ಗಿ:- ಕಲಬುರಗಿಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಆದೇಶ ಹೊರಡಿಸಿದ್ದಾರೆ.
Advertisement
ಮೂರು ದಿನಗಳಿಂದ ಬಿಟ್ಟು ಬಿಡದೇ ಸುರಿಯುತ್ತಿರುವ ಧಾರಾಕಾರ ಮಳೆ ಹಿನ್ನಲೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ಕಲಬುರಗಿ ಜಿಲ್ಲಾಡಳಿತ ರಜೆ ಘೋಷಿಸಿದೆ.
ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದ್ದು ಹಲವೆಡೆ ಗ್ರಾಮಗಳಿಗೂ ನೀರು ನುಗ್ಗಿದೆ. ರಸ್ತೆ ಸಂಪರ್ಕ ಸಹ ಹದಗೆಟ್ಟಿದ್ದು ಮಳೆಯ ಅವಾಂತರ ಜನರನ್ನ ಹೈರಾಣಾಗುವಂತೆ ಮಾಡಿದೆ.
ಇದೇವೇಳೆ ಚಿತ್ತಾಪುರ ಅಫಜಲಪುರ ಜೇವರ್ಗಿ ತಾಲೂಕಿನ ಭೀಮಾ ನದಿ ಉಕ್ಕಿ ಹರಿಯುತಿದ್ದು ನದಿದಡಕ್ಕೆ ತೆರಳದಂತೆ ಜಿಲ್ಲಾಡಳಿತ ಕಟ್ಟುನಿಟ್ಟಿನ ಸೂಚನೆ ರವಾನಿಸಿದೆ.
ಹವಾಮಾನ ಇಲಾಖೆ ಪ್ರಕಾರ ಎಲ್ಲೆಡೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.