ದೀಪಾವಳಿವರೆಗೂ ಕರ್ನಾಟಕದಲ್ಲಿ ಮಳೆ ಅಬ್ಬರ: ಹವಾಮಾನ ಇಲಾಖೆ ಮುನ್ಸೂಚನೆ!

0
Spread the love

ಬೆಂಗಳೂರು:- ದೀಪಾವಳಿವರೆಗೂ ಕರ್ನಾಟಕದಲ್ಲಿ ಮಳೆ ಅಬ್ಬರ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.

Advertisement

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಬಳ್ಳಾರಿ, ಯಾದಗಿರಿ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ವಿಜಯನಗರ, ವಿಜಯಪುರ, ಬೀದರ್ ನಲ್ಲಿ ಮಳೆಯಾಗಲಿದೆ.

ಎಚ್ಎಎಲ್ ನಲ್ಲಿ 22.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 21.9ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 23.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 24.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.


Spread the love

LEAVE A REPLY

Please enter your comment!
Please enter your name here