ಬೆಂಗಳೂರು:- ಇಂದಿನಿಂದ ಕರ್ನಾಟಕದಲ್ಲಿ ಭಾರೀ ಮಳೆ ಆಗಲಿದ್ದು, 24 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
Advertisement
ದಕ್ಷಿಣ ಕನ್ನಡ, ಬೆಂಗಳೂರು ನಗರ,ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ತುಮಕೂರು, ಕೋಲಾರ,ಮೈಸೂರು, ರಾಮನಗರ ಸೇರಿ 24 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.
ಬುಧವಾರ ರಾಜ್ಯದ ಹಲವೆಡೆ ಭಾರೀ ಮಳೆಯಾಗಿದೆ. ಬೆಂಗಳೂರು ನಗರ ಎಚ್ ಎಎಲ್ ಭಾಗದಲ್ಲಿ 29.2 ಮಿಮೀ ಮಳೆಯಾದರೆ ಒಟ್ಟಾರೆ ಬೆಂಗಳೂರು ನಗರದಲ್ಲಿ 7.8 ಮಿ.ಮೀ ಮಳೆ ಬಿದ್ದಿದೆ ಎಂದು ವರದಿಯಾಗಿದೆ.