ಮಂಗಳೂರಿನಲ್ಲಿ ಧಾರಾಕಾರ ಮಳೆ: ಕುಸಿದ ಗುಡ್ಡ, ರಸ್ತೆ ಸಂಚಾರ ಬಂದ್!

0
Spread the love

ಮಂಗಳೂರು:- ನೈರುತ್ಯ ಮುಂಗಾರು ಮಳೆ ಮಲೆನಾಡು, ಕರಾವಳಿ ಹಾಗೂ ಉತ್ತರ ಕರ್ನಾಟಕ ಕೆಲ ಭಾಗದಲ್ಲಿ ಮುಂದುವರೆದಿದ್ದು, ಕೆಲವು ಕಡೆಗಳಲ್ಲಿ ಧಾರಾಕಾರ ಮಳೆ ಸುರಿದಿದೆ.

Advertisement

ಅದರಂತೆ ಮಂಗಳೂರಿನಲ್ಲಿ ಧಾರಾಕಾರ ಮಳೆ‌ಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಮಂಗಳೂರು‌ ಹೊರವಲಯದ ವಾಮಂಜೂರು ಬಳಿಯ ಮಂಗಳೂರು-ಮೂಡಬಿದ್ರೆ-ಕಾರ್ಕಳ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಗುಡ್ಡ ಕುಸಿತ‌ವಾಗಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಆಟೋ ಹೋಗುತ್ತಿದ್ದಾಗಲೇ ಈ ಅವಘಡ ಸಂಭವಿಸಿದೆ.

ಘಟನೆಯಿಂದ ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ. ಗುಡ್ಡ ಕುಸಿದು ಒಂದು ಬದಿಯ ರಸ್ತೆ ಸಂಪೂರ್ಣ ಬಂದ್​ ಆಗಿದೆ. ಒಂದು ಬದಿಯ ರಸ್ತೆಯಲ್ಲೇ ಎರಡು ಕಡೆಯ ವಾಹನಗಳು ಸಂಚಾರ ನಡೆಸುತ್ತಿವೆ ಎಂದು ತಿಳಿದು ಬಂದಿದೆ.


Spread the love

LEAVE A REPLY

Please enter your comment!
Please enter your name here