ಕೆಂಗೇರಿ, ಮಹದೇವಪುರ ಹಲವೆಡೆ ಜೋರು ಮಳೆ: ಸವಾರರು ಹೈರಾಣು!

0
Spread the love

ಬೆಂಗಳೂರು:- ಇಂದು ಸಿಲಿಕಾನ್ ಸಿಟಿ ಬೆಂಗಳೂರಿನ ಹಲವಡೆ ಜೋರು ಮಳೆಯಾಗುತ್ತಿದ್ದು, ಭಾರೀ ಮಳೆಯಿಂದ ವಾಹನ ಸವಾರರು ಹೈರಾಣಾಗಿದ್ದಾರೆ.

Advertisement

ನಗರದ ಕೆಂಗೇರಿ, ಮಹದೇವಪುರ, ಗರುಡಚಾರ ಪಾಳ್ಯ, ಕೆ.ಆರ್.ಪುರಂ, ಹೂಡಿ, ಸಿಂಗನಾಯಕನಹಳ್ಳಿ, ಕೋರಮಂಗಲ, ಆಡುಗೋಡಿ, ಎಲೆಕ್ಟ್ರಾನಿಕ್‌ ಸಿಟಿ, ರಿಚ್ಮಂಡ್ ಸರ್ಕಲ್‌, ಶಾಂತಿನಗರ, ಮೆಜೆಸ್ಟಿಕ್ ಸೇರಿದಂತೆ ಹಲವೆಡೆ ಮಳೆಯಾಗುತ್ತಿದೆ. ಮಳೆಯಲ್ಲಿ ಸಿಲುಕಿದ ವಾಹನ ಸವಾರರು ಪರದಾಡಿದರು.

ವೈಟ್​ಫಿಲ್ಡ್​ ಸುತ್ತಮುತ್ತ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಚಾಲಕರು ನಿಧಾನವಾಗಿ ಮತ್ತು ಎಚ್ಚರಿಕೆಯಿಂದ ವಾಹನ ಚಲಾಯಿಸಿ ಎಂದು ಬೆಂಗಳೂರು ಟ್ರಾಫಿಕ್ ಪೊಲೀಸರು ಮನವಿ ಮಾಡಿಕೊಂಡಿದ್ದಾರೆ.

ಇನ್ನೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 3 ಗಂಟೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಿಕ್ಕಬಳ್ಳಾಪುರ, ದಾವಣಗೆರೆ, ರಾಮನಗರ, ಚಿತ್ರದುರ್ಗ, ತುಮಕೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಎಂದು ಹವಾಮಾನ ಇಲಾಖೆ ಭವಿಷ್ಯ ಹೇಳಿದೆ.


Spread the love

LEAVE A REPLY

Please enter your comment!
Please enter your name here