ಡಿ.13 ರಿಂದ ಬೆಂಗಳೂರು ಸೇರಿ ಹಲವೆಡೆ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ!

0
Spread the love

ಬೆಂಗಳೂರು:- ರಾಜಧಾನಿ ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಡಿ.13 ರಿಂದ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.

Advertisement

ಡಿಸೆಂಬರ್ 13ರಿಂದ ನಾಲ್ಕು ದಿನಗಳ ಕಾಲ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಮೈಸೂರು, ಮಂಡ್ಯ, ಹಾಸನ, ದಾವಣಗೆರೆ, ಚಾಮರಾಜನಗರ, ಹಾವೇರಿಯಲ್ಲಿ ಸಾಧಾರಣ ಮಳೆಯಾಗಲಿದ್ದು ಉಳಿದೆಡೆ ಒಣಹವೆ ಮುಂದುವರೆಯಲಿದೆ.

ಬೆಂಗಳೂರಿನಲ್ಲಿ ಇಂದು ಮೋಡಕವಿದ ವಾತಾವರಣವಿದೆ, ಎಚ್​ಎಎಲ್​ನಲ್ಲಿ 28.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.


Spread the love

LEAVE A REPLY

Please enter your comment!
Please enter your name here