ಬೆಂಗಳೂರು:- ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಆಗುವ ಸಾಧ್ಯತೆ ಇದ್ದು, ಭಾರತೀಯ ಹವಾಮಾನ ಇಲಾಖೆ, ಯೆಲ್ಲೋ ಅಲರ್ಟ್ ಘೋಷಿಸಿದೆ.
ಕೊಡಗು, ಹಾಸನ, ಚಿಕ್ಕಮಗಳೂರಿನಲ್ಲಿ ಅತಿ ಹೆಚ್ಚು ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಶಿವಮೊಗ್ಗ, ಮೈಸೂರು, ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ತುಮಕೂರು, ರಾಮನಗರ, ವಿಜಯನಗರದಲ್ಲಿ ಸಾಧಾರಣ ಮಳೆಯಾಗಲಿದೆ.
ಬೆಂಗಳೂರಿನ ಸಾಕಷ್ಟು ಕಡೆಗಳಲ್ಲಿ ಬುಧವಾರ ಮಳೆಯಾಗಿತ್ತು. ಎಚ್ಎಎಲ್ನಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 29.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.



