ಬೆಂಗಳೂರು:- ಕರ್ನಾಟಕದಲ್ಲಿ ನಾಳೆಯಿಂದ 3 ದಿನ ಭರ್ಜರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
Advertisement
ಮುಂದಿನ 10 ದಿನದಲ್ಲಿ ಬಂಗಾಳಕೊಲ್ಲಿಯಲ್ಲಿ 2 ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆ ಇದೆ. ಇದರ ಪರಿಣಾಮ ರಾಜ್ಯದಲ್ಲೂ ಭರ್ಜರಿ ಮಳೆಯಾಗಲಿದೆ ಎಂದರು.
ರಾಜ್ಯದ ದಕ್ಷಿಣ ಒಳನಾಡು, ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಡಿಸೆಂಬರ್ 10 ರಿಂದ ಡಿಸೆಂಬರ್ 12ರವರೆಗೆ ವ್ಯಾಪಕ ಮಳೆಯಾಗಲಿದೆ. ಇನ್ನುಳಿದ ದಿನಗಳಲ್ಲಿ ರಾಜ್ಯಾದ್ಯಂತ ಒಣ ಹವೆಯಿರುವ ಸಾಧ್ಯತೆಯಿದೆ ಎಂದು ತಿಳಿದು ಬಂದಿದೆ.
ಇನ್ನೂ ತಮಿಳುನಾಡಿನಿಂದ ಕರ್ನಾಟಕಕ್ಕೆ ಎಂಟ್ರಿ ಕೊಟ್ಟ ಫೆಂಗಲ್ ಚಂಡಮಾರುತ ಅರಬ್ಬಿಯತ್ತ ಸಾಗಿದೆ. ಕಳೆದ ಒಂದು ವಾರವಿಡೀ ಕರ್ನಾಟಕದ ಜನ ಮಳೆ, ಗಾಳಿ, ಚಳಿಗೆ ತತ್ತರಿಸಿ ಹೋಗಿದ್ದಾರೆ. ಈ ಫೆಂಗಲ್ ಚಂಡಮಾರುತದದಿಂದ ಸುಧಾರಿಸಿಕೊಳ್ಳುತ್ತಿರೋ ಹೊತ್ತಲ್ಲೇ ಮತ್ತೆರಡು ಸೈಕ್ಲೋನ್ ಸೃಷ್ಟಿಯಾಗುವ ಲಕ್ಷಣ ಕಂಡುಬಂದಿದೆ.