ಬೆಂಗಳೂರು:- ರಾಜಧಾನಿ ಬೆಂಗಳೂರಿನಲ್ಲಿ ಇಂದು ಕೂಡ ಜೋರು ಮಳೆ ಆಗುವ ಸಾಧ್ಯತೆ ಇರುವುದರಿಂದ ಇಂದು ಕೂಡ ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ.
ಅಲ್ಲದೇ ಶಾಲೆಗಳಿಗೆ ರಜೆ, ಉದ್ಯೋಗಿಗಳಿಗೆ ವರ್ಕ್ ಫ್ರಂ ಹೋಂ ಘೋಷಿಸಲಾಗಿದೆ. ಕರ್ನಾಟಕದ ಮಳೆ ಪೀಡಿತ ಪ್ರದೇಶಗಳಲ್ಲಿ ದಕ್ಷಿಣ ಕನ್ನಡ, ಬಿಜಾಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೋಲಾರ, ಕೊಡಗು, ಶಿವಮೊಗ್ಗ ಮತ್ತು ತುಮಕೂರು ಸೇರಿವೆ.
ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಬುಧವಾರ ಬೆಂಗಳೂರಿನಲ್ಲಿ ಪ್ರವಾಹ ಪರಿಹಾರಕ್ಕಾಗಿ ಮಳೆನೀರು ಚರಂಡಿ ಒತ್ತುವರಿಯನ್ನು ಕಟ್ಟುನಿಟ್ಟಾಗಿ ತೆರವುಗೊಳಿಸುವುದು ಸೇರಿದಂತೆ ಹಲವಾರು ಕ್ರಮಗಳನ್ನು ಘೋಷಿಸಿದ್ದಾರೆ. ಮಂಗಳವಾರ ಕೆಂಗೇರಿ ಕೆರೆಯಲ್ಲಿ ಮುಳುಗಡೆಯಾದ ಇಬ್ಬರು ಮಕ್ಕಳ ಕುಟುಂಬಕ್ಕೆ ಬಿಬಿಎಂಪಿಯಿಂದ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದಿದ್ದಾರೆ.
ಬೆಂಗಳೂರು ನಗರದಲ್ಲಿ ಕಳೆದ 24 ಗಂಟೆಗಳಲ್ಲಿ 23.6 ಮಿಮೀ ಮಳೆ ದಾಖಲಾಗಿದೆ. ಭಾರತೀಯ ಹವಾಮಾನ ಇಲಾಖೆ ಇಂದು ಸಾಧಾರಣ ಮಳೆ ಮತ್ತು ಗುಡುಗು ಸಹಿತ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವನ್ನು ಮುನ್ಸೂಚನೆ ನೀಡಿದೆ. ಐಟಿ ಹಬ್ನಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ.