Home Karnataka News ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇಂದು ಭಾರೀ ಮಳೆ ಸಾಧ್ಯತೆ..! ಹಲವು ಜಿಲ್ಲೆಗಳಿಗೆ ಅಲರ್ಟ್

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇಂದು ಭಾರೀ ಮಳೆ ಸಾಧ್ಯತೆ..! ಹಲವು ಜಿಲ್ಲೆಗಳಿಗೆ ಅಲರ್ಟ್

0
ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇಂದು ಭಾರೀ ಮಳೆ ಸಾಧ್ಯತೆ..! ಹಲವು ಜಿಲ್ಲೆಗಳಿಗೆ ಅಲರ್ಟ್
Spread the love

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವೆಡೆ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ವಿಶೇಷವಾಗಿ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಮೈಸೂರು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ನಗರದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಸೂಚಿಸಿದೆ. ನಗರದಲ್ಲಿ ಗರಿಷ್ಠ ತಾಪಮಾನ 34.8 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 23.8 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲಿ ದಾಖಲಾಗುವ ಸಾಧ್ಯತೆ ಇದೆ.

ಕರಾವಳಿ ಭಾಗಗಳಾದ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದ ಗಾಳಿಯೊಂದಿಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಂಗಳೂರು ಹಾಗೂ ಉಡುಪಿ ಭಾಗಗಳಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ದಾಟುವ ಸಾಧ್ಯತೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮಾತ್ರ ಶುಷ್ಕ ವಾತಾವರಣ ಮುಂದುವರಿಯಲಿದೆ.

ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಬಿಸಿಲಿನ ಬೇಗೆ ಮುಂದುವರಿದರೂ, ಕೆಲವು ಕಡೆಗಳಲ್ಲಿ ಗುಡುಗು ಹಾಗೂ ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ ಇದೆ. ಬೆಳಗಾವಿ, ಧಾರವಾಡ, ಗದಗ, ಹಾವೇರಿ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಗಂಟೆಗೆ 40ರಿಂದ 50 ಕಿಲೋಮೀಟರ್ ವೇಗದ ಬಿರುಗಾಳಿ ಬೀಸುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.

ಇನ್ನು ಮೇ 15 ಮತ್ತು 16ರಂದು ದಕ್ಷಿಣ ಒಳನಾಡಿನ ಕೆಲವು ಪ್ರದೇಶಗಳಲ್ಲಿ 64.5 ಮಿ.ಮೀದಿಂದ 115.5 ಮಿ.ಮೀ ವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಯೆಲ್ಲೋ ಅಲರ್ಟ್ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಜನರು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಮನವಿ ಮಾಡಲಾಗಿದೆ.


Spread the love

LEAVE A REPLY

Please enter your comment!
Please enter your name here