ಧಾರಾಕಾರ ಮಳೆ: ಉತ್ತರ ಕರ್ನಾಟಕದಲ್ಲಿ ಜನಜೀವನ ಅಸ್ತವ್ಯಸ್ತ!

0
Spread the love

ವಿಜಯಪುರ:- ಉತ್ತರ ಕರ್ನಾಟಕದ ಹಲವೆಡೆ ಮಂಗಳವಾರ ಭಾರೀ ಮಳೆ ಆಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿತ್ತು.

Advertisement

ವಿಜಯಪುರ ಜಿಲ್ಲೆಯ ಹಲವೆಡೆ ಧಾರಾಕಾರ ಮಳೆ ಆಗಿದ್ದು, ಗುಡುಗು, ಸಿಡಿಲು ಸಮೇತ ವರುಣ ಆರ್ಭಟ ಜೋರಾಗಿತ್ತು. ಇನ್ನೂ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ತಾವರಗೇರಾದಲ್ಲಿ ಭಾರೀ ಮಳೆಯಾಗಿ ರಸ್ತೆಗಳು ಜಲಾವೃತಗೊಂಡಿತ್ತು.

ಗಡಿ ಜಿಲ್ಲೆ ಬೀದರ್‌ನಲ್ಲಿ ಸತತ ಒಂದು ಗಂಟೆಯಿಂದ ಭಾರೀ ಮಳೆಯಾಗಿದ್ದು, ಗುಡುಗು, ಸಿಡಿಲು ಸಹಿತ ವರುಣ ಅಬ್ಬರಿಸಿದ್ದಾನೆ. ಬೀದರ್, ಬಸವಕಲ್ಯಾಣದಲ್ಲಿ, ಕಮಲನಗರ್, ಭಾಲ್ಕಿ ಸೇರಿದಂತೆ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗಿದ್ದು, ಜನ ಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.

ಬೀದರ್ ಚಿದ್ರಿ, ಮೇಲೂರು ಕಾಲೋನಿಯ ಮನೆಗಳಿಗೆ ನೀರು ನುಗ್ಗಿದ್ದು, ಅವಾಂತರ ಸೃಷ್ಟಿಯಾಗಿದೆ. ಗುಂಪಾ ರಸ್ತೆ, ಏರ್‌ಪೋರ್ಟ್ ರಸ್ತೆ, ಹೈದ್ರಾಬಾದ್ ರಸ್ತೆಗಳು ಕೆರೆಯಂತಾಗಿವೆ. ವಾಹನ ಚಾಲಕರು ಪರದಾಡಿದ್ದು, ತಳ್ಳಿಕೊಂಡು ಹೋಗುವ ಪರಿಸ್ಥಿತಿ ಬಂದಿದೆ.


Spread the love

LEAVE A REPLY

Please enter your comment!
Please enter your name here