ರಾಯಚೂರು: ಭಾರೀ ಮಳೆಯಿಂದಾಗಿ ಕಟಾವಿಗೆ ಬಂದಿದ್ದ ಭತ್ತದ ಬೆಳೆ ಮಕಾಡೆ ಮಲಗಿರುವ ಘಟನೆ ಜಿಲ್ಲೆಯ ಮಸ್ಕಿ ತಾಲೂಕಿನಲ್ಲಿ ಜರುಗಿದೆ. ಘಟನೆಯಿಂದ ರೈತನ ಬೆಳೆ ನೆಲ ಕಚ್ಚಿದೆ.
Advertisement
ಕೆಲವೆಡೆ ಗದ್ದೆಯಲ್ಲಿ ನೀರು ನಿಂತು ಅಪಾರ ಪ್ರಮಾಣದಲ್ಲಿ ಬೆಳೆ ನಷ್ಟವಾಗಿದೆ. ಆಲಿಕಲ್ಲು ಮಳೆಗೆ ಗೌಡನಬಾವಿ, ಸಾಗರ ಕ್ಯಾಂಪ್, ಬೆಳ್ಳಿಗನೂರು ಗ್ರಾಮದಲ್ಲಿ ಬೆಳೆ ಹಾನಿಯಾಗಿದೆ. ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ ಅಂತ ರೈತರು ಅಳಲು ತೋಡಿಕೊಂಡಿದ್ದಾರೆ. ಒಣಗಿರುವ ಭತ್ತದ ಕಾಳು ನೆಲಕ್ಕೆ ಬಿದ್ದು ಮೊಳಕೆ ಒಡೆಯುವ ಆತಂಕ ಎದುರಾಗಿದೆ.
ಇನ್ನೂ ರಾಜ್ಯದ ಹಲವೆಡೆ ಇಂದಿನಿಂದ ಏ.16ರ ವರೆಗೆ ಭಾರೀ ಗಾಳಿ, ಗುಡುಗು ಮಿಂಚು ಸಹಿತ ಮಳೆಯಾಗಲಿದೆ.