ಬೆಂಗಳೂರು:- ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಡಿಸೆಂಬರ್ 17ರ ವರೆಗೆ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Advertisement
ಇಂದು ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಮತ್ತು ಮಳೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಗುಡುಗು, ಸಿಡಿಲು ಸಹಿತ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಬಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ರಾಜ್ಯದ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ,ಮಂಡ್ಯ, ಮಡಿಕೇರಿ, ಮೈಸೂರು.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಬೆಳಗಾವಿ, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.