ಬೆಂಗಳೂರು:- ಕರ್ನಾಟಕದ ದಕ್ಷಿಣ ಒಳನಾಡು, ಕರಾವಳಿ ಮತ್ತು ಮಳೆನಾಡು ಜಿಲ್ಲೆಗಳಲ್ಲಿ ಡಿಸೆಂಬರ್ 3ರವರೆಗೆ ಗುಡುಗು ಸಿಡಿಲು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಲಾಗಿದೆ.
Advertisement
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಮಗಳೂರು, ಚಾಮರಾಜನಗರ ಜಿಲ್ಲೆಯಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಇನ್ನು, ಕರ್ನಾಟಕದ ಕರಾವಳಿ ಭಾಗದ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲೂ ಮಳೆಯಾಗುವ ಸಂಭವ ಇದೆ.
ಕಾವೇರಿ ಜಲಾನಯನ ಪ್ರದೇಶದಲ್ಲಿ ಡಿಸೆಂಬರ್ 3ರವರೆಗೆ ಚದುರಿದಿಂದ ವ್ಯಾಪಕವಾಗಿ ಸಾಧಾರಣದಿಂದ ಭಾರಿ ಮಳೆ ಹಾಗೂ ಅಲ್ಲಲ್ಲಿ ಅತಿಭಾರಿ ಮಳೆಯಾಗುವ ನಿರೀಕ್ಷೆಯಿದೆ. ನಂತರ ಮಳೆ ಕಡಿಮೆಯಾಗುವ ಸಾಧ್ಯತೆ ಇದೆ. ಫೆಂಗಲ್ ಚಂಡಮಾರುತ ಪರಿಣಾಮ ಬೃಹತ್ ಗಾತ್ರದ ಅಲೆಗಳು ದಡಕ್ಕೆ ಅಪ್ಪಳಿಸುವ ಸಾಧ್ಯತೆ ಇದೆ. ಹೀಗಾಗಿ ಸಮುದ್ರ ತೀರ ಪ್ರದೇಶದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.