Rain News: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ- ಆರೆಂಜ್‌ ಅಲರ್ಟ್‌ ಘೋಷಣೆ!

0
Spread the love

ಬೆಂಗಳೂರು:- ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Advertisement

ಬಾಗಲಕೋಟೆ, ಬೆಳಗಾವಿ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಹಾಸನ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗಲಿದೆ. ಇನ್ನು, ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಹೆಚ್ಚಿನ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಉಳಿದ ಜಿಲ್ಲೆಗಳ ಮೇಲೆ ಮತ್ತು ದಕ್ಷಿಣ ಒಳನಾಡಿನ ಕರ್ನಾಟಕದ ಉಳಿದ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ರಾಜ್ಯದ ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತಿರುವ ಮಲೆನಾಡು ಜಿಲ್ಲೆಗಳಲ್ಲಿ ಇಂದು & ನಾಳೆ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಈ 2 ದಿನ ಭಾರತೀಯ ಹವಾಮಾನ ಇಲಾಖೆಯು ಆರೆಂಜ್‌ ಅಲರ್ಟ್‌ ಘೋಷಿಸಿ ಎಚ್ಚರಿಕೆ ನೀಡಿದೆ.

ಆಗಸ್ಟ್‌ 26ರಂದು ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಪ್ರತ್ಯೇಕವಾದ ಭಾರೀ ಮಳೆಯಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಬಾಗಲಕೋಟೆ, ಬೆಳಗಾವಿ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಹಾಸನ ಜಿಲ್ಲೆಗಳಲ್ಲಿ ಪ್ರತ್ಯೇಕ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಹೆಚ್ಚಿನ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ.

ಉತ್ತರ ಒಳನಾಡಿನ ಉಳಿದ ಜಿಲ್ಲೆಗಳ ಮೇಲೆ ಮತ್ತು ದಕ್ಷಿಣ ಒಳನಾಡಿನ ಕರ್ನಾಟಕದ ಉಳಿದ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.


Spread the love

LEAVE A REPLY

Please enter your comment!
Please enter your name here