ಬೆಂಗಳೂರು: ಮುಂದಿನ ಮೂರು ಗಂಟೆಗಳೊಳಗೆ ರಾಜ್ಯದ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕಲಬುರಗಿ, ಯಾದಗಿರಿ, ರಾಯಚೂರು, ದಕ್ಷಿಣ ಕನ್ನಡ, ಉಡುಪಿ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಗುಡುಗು-ಸಿಡಿಲಿನೊಂದಿಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.
ಭಾರೀ ಮಳೆಯ ಹಿನ್ನೆಲೆ ಕಲಬುರಗಿ, ಯಾದಗಿರಿ, ರಾಯಚೂರು, ಉಡುಪಿ, ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಗುಡುಗು ಸಹಿತ ಮಳೆಯ ಸಂದರ್ಭದಲ್ಲಿ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.



