ಬೆಂಗಳೂರು:- ಭಾರೀ ಮಳೆ ಹಿನ್ನೆಲೆ ಕರ್ನಾಟಕದ 6 ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
Advertisement
ಕರ್ನಾಟಕದ ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬೀದರ್ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆಯಾಗಿದೆ. ಗಂಟೆಗೆ 30-40ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು ಕೆಲ ಜಿಲ್ಲೆಗಳಲ್ಲಿ ಮಿಂಚು ಗುಡುಗು ಸಹಿತ ಭಾರೀ ಮಳೆಯಾಗಲಿದೆ. ಉಳಿದ ಎಲ್ಲಾ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಇನ್ನೂ ಕರ್ನಾಟಕದ ಹಲವೆಡೆ ಭಾರೀ ಮಳೆ ಆಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.