ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಮಳೆ ಆಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಅದರಂತೆ ಇಂದು ಕೂಡ ನಗರದಲ್ಲಿ ವರುಣ ಅಬ್ಬರಿಸಿದ್ದಾನೆ. ನಗರದ ಕೆ.ಆರ್.ವೃತ್ತ, ಕಾರ್ಪೊರೇಷನ್, ವಿಧಾನಸೌಧ, ಮೆಜೆಸ್ಟಿಕ್, ಗಾಂಧಿನಗರ, ಓಕಳಿಪುರಂ, ರಾಜಾಜಿನಗರ, ಗಿರಿನಗರ, ಬಸವೇಶ್ವರ ನಗರ, ಮಲ್ಲೇಶ್ವರಂ, ಆರ್.ಆರ್.ನಗರ, ವಿಜಯನಗರ ಸೇರಿದಂತೆ ನಗರದ ಹಲವೆಡೆ ಮಳೆಯಾಗಿದೆ.
ಇನ್ನೂ ರಾಜ್ಯಾದ್ಯಂತ ಮುಂದಿನ ಐದು ದಿನ ಗುಡುಗು, ಮಿಂಚು ಸಹಿತ ದಕ್ಷಿಣ ಒಳನಾಡು ಮತ್ತು ಮಲೆನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇನ್ನು, ಬೆಂಗಳೂರಿನಲ್ಲಿ ಮುಂದಿನ ಮೂರು ದಿನ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ, ಮಲೆನಾಡು, ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲಿ ತುಂತುರು ಮಳೆ, ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಭವಿಷ್ಯ ನುಡಿದಿದೆ.