HomeKarnataka Newsರಾಜ್ಯದಲ್ಲಿ ಮತ್ತೆ ಮಳೆಯ ಅಬ್ಬರ; ಮೇ 31ರವರೆಗೆ ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ

ರಾಜ್ಯದಲ್ಲಿ ಮತ್ತೆ ಮಳೆಯ ಅಬ್ಬರ; ಮೇ 31ರವರೆಗೆ ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ

For Dai;y Updates Join Our whatsapp Group

Spread the love

ಬೆಂಗಳೂರು: ರಾಜ್ಯದಲ್ಲಿ ದಿನದ ವೇಳೆಯಲ್ಲಿ ಬಿಸಿಲಿನ ತಾಪ ಮುಂದುವರಿದಿದ್ದರೂ, ಮಧ್ಯಾಹ್ನದ ಬಳಿಕ ವಾತಾವರಣದಲ್ಲಿ ದಿಢೀರ್ ಬದಲಾವಣೆ ಕಾಣಿಸಿಕೊಳ್ಳುತ್ತಿದೆ.

ಭಾರತೀಯ ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯ ಪ್ರಕಾರ, ಮೇ 31ರವರೆಗೆ ರಾಜ್ಯದ ಹಲವು ಭಾಗಗಳಲ್ಲಿ ಗುಡುಗು, ಸಿಡಿಲು ಹಾಗೂ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡಿಗೆ ಆರೆಂಜ್ ಅಲರ್ಟ್:

ಮೇ 28ರಂದು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ತೀವ್ರ ಹವಾಮಾನ ಪರಿಸ್ಥಿತಿ ಉಂಟಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ‘ಆರೆಂಜ್ ಅಲರ್ಟ್’ ಘೋಷಿಸಿದೆ. ಭಾರೀ ಗುಡುಗು, ಮಿಂಚು ಹಾಗೂ ಚಂಡಮಾರುತದ ಮಾದರಿಯ ಬಿರುಗಾಳಿ ಬೀಸುವ ಸಾಧ್ಯತೆ ಇದೆ.

ಮೇ 29ರಿಂದ ಮೇ 31ರವರೆಗೆ ಈ ಭಾಗಕ್ಕೆ ‘ಯೆಲ್ಲೋ ಅಲರ್ಟ್’ ನೀಡಲಾಗಿದ್ದು, ಅಲ್ಲಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಜೂನ್ 1ರಿಂದ ಜೂನ್ 3ರವರೆಗೆ ಯಾವುದೇ ವಿಶೇಷ ಹವಾಮಾನ ಎಚ್ಚರಿಕೆ ಇಲ್ಲ ಎಂದು ಇಲಾಖೆ ತಿಳಿಸಿದೆ.

ಉತ್ತರ ಒಳನಾಡಿನಲ್ಲಿ ಎರಡು ದಿನ ಹೈ ಅಲರ್ಟ್:

ಮೇ 28 ಮತ್ತು 29ರಂದು ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ತೀವ್ರ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಎರಡು ದಿನಗಳ ಕಾಲ ‘ಆರೆಂಜ್ ಅಲರ್ಟ್’ ಜಾರಿಯಲ್ಲಿರಲಿದೆ. ತೀವ್ರ ಸಿಡಿಲು ಹಾಗೂ ಬಿರುಗಾಳಿ ಅಪ್ಪಳಿಸುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಲಾಗಿದೆ.

ಮೇ 30 ಮತ್ತು 31ರಂದು ಹವಾಮಾನದ ತೀವ್ರತೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗಲಿದ್ದು, ‘ಯೆಲ್ಲೋ ಅಲರ್ಟ್’ ಮುಂದುವರಿಯಲಿದೆ. ಜೂನ್ 1ರಿಂದ ಮಳೆಯ ಅಬ್ಬರ ಕಡಿಮೆಯಾಗುವ ನಿರೀಕ್ಷೆಯಿದೆ.

ಕರಾವಳಿಯಲ್ಲಿ ನಾಲ್ಕು ದಿನ ಮಳೆ ಸಾಧ್ಯತೆ;

ಮೇ 28ರಿಂದ ಮೇ 31ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ನಿರಂತರವಾಗಿ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ. ಗುಡುಗು ಸಹಿತ ಜೋರಾದ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.

ಸಾರ್ವಜನಿಕರಿಗೆ ಎಚ್ಚರಿಕೆ:

ಮಧ್ಯಾಹ್ನದ ನಂತರ ಮೋಡ ಕವಿದ ವಾತಾವರಣ ನಿರ್ಮಾಣವಾಗಿ ಕ್ಷಣಾರ್ಧದಲ್ಲಿ ಭಾರೀ ಗಾಳಿ-ಮಳೆ ಸಂಭವಿಸುವ ಸಾಧ್ಯತೆ ಇರುವುದರಿಂದ, ಸಾರ್ವಜನಿಕರು ಸಿಡಿಲಿನ ಸಮಯದಲ್ಲಿ ಸುರಕ್ಷಿತ ಕಟ್ಟಡಗಳಲ್ಲಿ ಆಶ್ರಯ ಪಡೆಯುವಂತೆ ಸೂಚಿಸಲಾಗಿದೆ.

ರೈತರು ಕಟಾವು ಮಾಡಿದ ಬೆಳೆಗಳನ್ನು ಸುರಕ್ಷಿತವಾಗಿ ಮುಚ್ಚಿಡುವಂತೆ ಹವಾಮಾನ ಇಲಾಖೆ ಸಲಹೆ ನೀಡಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!