ಬೆಂಗಳೂರು:- ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮೇ.26 ರವರೆಗೆ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
Advertisement
ರಾಜ್ಯಾದ್ಯಂತ ಇಂದು ಹಲವು ಕಡೆ ಗುಡುಗು ಸಹಿತ ವ್ಯಾಪಕ ಮಳೆಯಾಗಲಿದ್ದರೆ ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ಬೀದರ್, ಚಿಕ್ಕಮಗಳೂರು, ಉಡುಪಿ, ಶಿವಮೊಗ್ಗ, ಕೋಲಾರ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಭಾರೀ ಮಳೆಯಾಗಲಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಮುಂದಿನ 5 ದಿನ ಆರೆಂಜ್ ಅಲರ್ಟ್ ಜಾರಿಯಾಗಿದ್ದು, ಗಾಳಿ ಸಹಿತ ಮಳೆಯಾಗಲಿದೆ. ಗಂಟೆಗೆ 40 – 50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.