ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣ ಸುತ್ತಮುತ್ತ ಮಳೆ ಆರ್ಭಟ: ಫುಲ್ ಟ್ರಾಫಿಕ್​ ಜಾಮ್!

0
Spread the love

ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣ ಸುತ್ತಮುತ್ತ ಮಳೆ ಆರ್ಭಟ ಜೋರಾಗಿದ್ದು, ಫುಲ್ ಟ್ರಾಫಿಕ್ ಜಾಮ್ ಆಗಿದೆ. ನಗರದ ಶಾಂತಿನಗರ, ರಿಚ್ಮಂಡ್​ ಸರ್ಕಲ್​, ಕಾರ್ಪೊರೇಷನ್, ಕಬ್ಬನ್​ಪಾರ್ಕ್, ಚಿನ್ನಸ್ವಾಮಿ ಮೈದಾನ, ವಿಧಾನಸೌಧ, ಕೆ.ಆರ್​.ಮಾರ್ಕೆಟ್, ಮೆಜೆಸ್ಟಿಕ್​, ರಾಜಾಜಿನಗರ, ಲಾಲ್​ಬಾಗ್​, ಜಯನಗರ ಸೇರಿದಂತೆ ಹಲವೆಡೆ ಮಳೆಯಾಗುತ್ತಿದೆ.

Advertisement

ಭಾರಿ ಮಳೆಯಾಗುತ್ತಿರುವುದರಿಂದ ನಗರದ ಹಲವು ರಸ್ತೆಗಳ ಮೇಲೆ ನೀರು ನಿಂತಿದೆ. ಹೆಬ್ಬಾಳದಲ್ಲಿ ಮಳೆ ಬರುತ್ತಿರುವುದರಿಂದ ವೀರಣ್ಣಪಾಳ್ಯ ಕಡೆಯಿಂದ ಹೆಬ್ಬಾಳ ಕಡೆ ಹೋಗುವ ರಸ್ತೆಯಲ್ಲಿ ತೀವ್ರ ಸಂಚಾರದಟ್ಟಣೆ ಉಂಟಾಗಿದೆ. ಹಾಗೆ, ವರ್ತೂರು ಕಡೆಯಿಂದ, ವೈಟಫಿಲ್ಡ್ ಕಡೆಗೆ ಹೋಗುವ ಮಾರ್ಗದಲ್ಲಿ, ಕಸ್ತೂರಿನಗರ ಕಡೆಯಿಂದ ಹೆಬ್ಬಾಳ ಮುಖ್ಯ ರಸ್ತೆಯ ಕಡೆಗೆ ಹೋಗುವ ಮಾರ್ಗದಲ್ಲಿ, ಬಾಗಲೂರು ಕಡೆಯಿಂದ ನಗರ ಮತ್ತು ವಿಮಾನ ನಿಲ್ದಾಣದ ಕಡೆಗೆ ಸಂಚರಿಸುವ ರಸ್ತೆಯಲ್ಲಿ ಮತ್ತು ನ್ಯಾಷನಲ್ ಗೇಮ್ಸ್ ವಿಲೇಜ್ ಗೇಟ್​ನಿಂದ ಸೋನಿ ವರ್ಲ್ಡ್ ಜಂಕ್ಷನ್ ಕಡೆಗೆ ಹೋಗುವ ರಸ್ತೆಯಲ್ಲಿ ಸಂಚಾರ ದಟ್ಟಣೆ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ನಿಧಾನವಾಗಿ ಚಲಿಸುವಂತೆ ಬೆಂಗಳೂರು ಸಂಚಾರಿ ಪೊಲೀಸರು ಮನವಿ ಮಾಡಿಕೊಂಡಿದ್ದಾರೆ.

RCB Vs KKR ಪಂದ್ಯ ರದ್ದು:-

ಇನ್ನೂ ಭಾರೀ ಮಳೆ ಕಾರಣದಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೋಲ್ಕತ್ತ ನೈಟ್ ರೈಡರ್ಸ್ ತಂಡದ ಪಂದ್ಯ ರದ್ದಾಗುವ ಸಾಧ್ಯತೆ ಇದೆ. ಹೀಗಾಗಿ ಅಭಿಮಾನಿಗಳಿಗೆ ಭಾರೀ ನಿರಾಸೆ ಮೂಡಿದೆ.


Spread the love

LEAVE A REPLY

Please enter your comment!
Please enter your name here