HomeBengaluru Newsಇಂದು, ನಾಳೆ ಕರ್ನಾಟಕದಲ್ಲಿ ವರುಣನ ಅಬ್ಬರ; ಕರಾವಳಿ ಜಿಲ್ಲೆಗಳಿಗೆ ಭಾರಿ ಮಳೆಯ ಮುನ್ಸೂಚನೆ!

ಇಂದು, ನಾಳೆ ಕರ್ನಾಟಕದಲ್ಲಿ ವರುಣನ ಅಬ್ಬರ; ಕರಾವಳಿ ಜಿಲ್ಲೆಗಳಿಗೆ ಭಾರಿ ಮಳೆಯ ಮುನ್ಸೂಚನೆ!

For Dai;y Updates Join Our whatsapp Group

ಬೆಂಗಳೂರು: ಕರ್ನಾಟಕದ ಹಲವೆಡೆ ಅಕ್ಟೋಬರ್ 2 ಮತ್ತು 3ರಂದು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅನೇಕ ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಹಾಗೂ ಹಾವೇರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ಬೀದರ್, ಕಲಬುರಗಿ, ರಾಯಚೂರು, ಕೊಪ್ಪಳ, ಗದಗ, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣಹವೆ ಮುಂದುವರಿಯಲಿದೆ.

ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಇನ್ನು ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣಹವೆ ಇರಲಿದೆ.

ಕರಾವಳಿಯಲ್ಲಿ ಗುಡುಗು-ಸಿಡಿಲಿನೊಂದಿಗೆ ಭಾರಿ ಮಳೆ ಸಾಧ್ಯತೆ:

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು-ಸಿಡಿಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ ತಿಳಿಸಿದೆ.

ಅಕ್ಟೋಬರ್ 3ರಂದು ಕೂಡ ಇದೇ ರೀತಿಯ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಗಳಲ್ಲಿ ಅನೇಕ ಕಡೆ ಮಳೆಯಾಗುವ ಸಾಧ್ಯತೆ ಇದ್ದರೆ, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗಬಹುದು.

ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆ ಇದೆ.

ಹಲವೆಡೆ ಮಳೆ ದಾಖಲು:

ಗುರುವಾರ ಸಂಜೆಗೆ ಕೊನೆಗೊಂಡ 24 ಗಂಟೆಗಳ ಅವಧಿಯಲ್ಲಿ ದಕ್ಷಿಣ ಒಳನಾಡಿನಲ್ಲಿ ನೈಋತ್ಯ ಮುಂಗಾರು ಸಾಮಾನ್ಯವಾಗಿತ್ತು. ಉತ್ತರ ಒಳನಾಡು ಹಾಗೂ ಕರಾವಳಿ ಕರ್ನಾಟಕದಲ್ಲಿ ಮುಂಗಾರು ದುರ್ಬಲವಾಗಿತ್ತು.

ಈ ಅವಧಿಯಲ್ಲಿ ಕರಾವಳಿ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆ ಮತ್ತು ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗಿದೆ. ಹಾಸನ ಜಿಲ್ಲೆಯ ಬೇಲೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಹಾಗೂ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯಲ್ಲಿ ತಲಾ 4 ಸೆಂ.ಮೀ. ಮಳೆ ದಾಖಲಾಗಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img