ಕರ್ನಾಟಕದ ಹಲವೆಡೆ ನಾಳೆಯಿಂದ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ!

0
Spread the love

ಬೆಂಗಳೂರು:- ಕರ್ನಾಟಕದಲ್ಲಿ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದ ಹಲವು ಜಿಲ್ಲೆಗಳಲ್ಲಿ ಸಾಕಷ್ಟು ಅವಾಂತರ ಸೃಷ್ಟಿ ಮಾಡಿದೆ. ಇನ್ನೂ ನಾಳೆಯಿಂದ ಕರ್ನಾಟಕದಲ್ಲಿ ವರುಣನ ಆರ್ಭಟ ಮತ್ತಷ್ಟು ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದ್ದು, ರೆಡ್ ಅಲರ್ಟ್​ ಘೋಷಿಸಲಾಗಿದೆ.

Advertisement

ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಬಳ್ಳಾರಿ, ಯಾದಗಿರಿ, ರಾಯಚೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಎಚ್​ಎಎಲ್​ನಲ್ಲಿ31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 30.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 31.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.


Spread the love

LEAVE A REPLY

Please enter your comment!
Please enter your name here